ಕುವೈತ್ಕುವೈತ್ ಅಗ್ನಿ ದುರಂತ | ಕಲಬುರಗಿಯ ವಿಜಯಕುಮಾರ್ ಕುಟುಂಬಕ್ಕೆ...

ಕುವೈತ್ ಅಗ್ನಿ ದುರಂತ | ಕಲಬುರಗಿಯ ವಿಜಯಕುಮಾರ್ ಕುಟುಂಬಕ್ಕೆ 5 ಲಕ್ಷ ರೂ.ಪರಿಹಾರ ನೀಡಲು ಸಿಎಂ ಸೂಚನೆ

ಬೆಂಗಳೂರು: ‘ಕುವೈತ್ ಅಗ್ನಿ ದುರಂತದಲ್ಲಿ ಸಾವಿಗೀಡಾಗಿರುವ ಜಿಲ್ಲೆಯ ಆಳಂದ ತಾಲೂಕಿನ ಸರಸಂಬ ಗ್ರಾಮದ 40 ವರ್ಷದ ವಿಜಯ ಕುಮಾರ್ ಅವರ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 5 ಲಕ್ಷ ರೂಪಾಯಿಗಳ ಪರಿಹಾರವನ್ನು ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿಲ್ಲಿ ಸೂಚನೆ ನೀಡಿದ್ದಾರೆ.

ಕುವೈತ್ ಅಗ್ನಿ ದುರಂತ ಮೃತಪಟ್ಟಿರುವ ಕೇರಳ ನಿವಾಸಿಗಳ ಕುಟಂಬಕ್ಕೆ ಅಲ್ಲಿನ ಸರಕಾರ  5 ಲಕ್ಷ ರೂ.ಗಳ ಪರಿಹಾರ ಘೋಷಿಸಿದೆ. ಅದರಂತೆಯೇ ಕರ್ನಾಟಕ ಸರಕಾರವೂ ಆರ್ಥಿಕ ನೆರವು ಘೋಷಿಸಬೇಕೆಂದು ರಾಜ್ಯ ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ ಅವರ ಮನವಿಗೆ ಸ್ಪಂದಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೃತ ವಿಜಯಕುಮಾರ್ ಕುಟುಂಬಕ್ಕೆ 5 ಲಕ್ಷ ರೂ.ಗಳ ಪರಿಹಾರವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಒದಗಿಸಲು ಸೂಚಿಸಿದ್ದಾರೆ ಎಂದು ಸಿಎಂ ಕಚೇರಿ ಪ್ರಕಟಣೆ ತಿಳಿಸಿದೆ.

‘ಭಾರತೀಯರು ಕೆಲಸ ಆರಿಸಿ ಗಲ್ಸ್ ರಾಷ್ಟ್ರಗಳಿಗೆ ವಲಸೆ ಹೋಗುವುದು ಸಾಮಾನ್ಯ. ಜೂ.12ರಂದು ಕುವೈತ್ ಮಾಂಗಾಫ್‍ನಲ್ಲಿರುವ ವಸತಿ ಸಮುಚ್ಚಯವೊಂದರಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ದುರಂತದಲ್ಲಿ 45 ಮಂದಿ ಭಾರತೀಯ ಪ್ರಜೆಗಳು ಸಾವನ್ನಪ್ಪಿದ್ದಾರೆ. ಇದೊಂದು ದುರಾದೃಷ್ಟಕರ ಸಂಗತಿಯಾಗಿದೆ’

ಡಾ.ಆರತಿ ಕೃಷ್ಣ ಉಪಾಧ್ಯಕ್ಷೆ ಅನಿವಾಸಿ ಭಾರತೀಯ ಸಮಿತಿ

Hot this week

ದುಬೈ; ಅ.11ರಂದು ‘ಗಮ್ಮತ್ ಕಲಾವಿದೆರ್ ದುಬೈ’ ತಂಡದಿಂದ ‘ಪೋನಗ ಕೊನೊಪರಾ..?’ ನಾಟಕ

ದುಬೈ: ಯುಎಇಯಲ್ಲಿರುವ ನಾಟಕ ಅಭಿಮಾನಿಗಳಿಗೆ ಕಳೆದ ಹಲವಾರು ವರ್ಷಗಳಿಂದ ಮನರಂಜನೆ ನೀಡುತ್ತಾ...

ಅಮೇರಿಕದಲ್ಲಿ ‘ಕಾಂತಾರ: ಚಾಪ್ಟರ್ 1’ ಯಶಸ್ಸಿನ ಅಬ್ಬರ! ಸಿನೆಮಾ ನೋಡಿದವರು ಏನೆಂದಿದ್ದಾರೆ ನೋಡಿ…!

ನ್ಯೂಯಾರ್ಕ್: ಬಹುನಿರೀಕ್ಷಿತ ‘ಕಾಂತಾರ: ಚಾಪ್ಟರ್ 1’ ಎಲ್ಲೆಡೆ ಬಿಡುಗಡೆಗೊಂಡಿದ್ದು, ಅಮೇರಿಕದ ನ್ಯೂಯಾರ್ಕ್...

Related Articles

Popular Categories