ಬಹರೈನ್ಕೆಸಿಎಫ್ ಬಹರೈನ್: ಭಾರತದ 78ನೇ ಸ್ವಾತಂತ್ರ್ಯೋತ್ಸವ ಸಂಗಮ

ಕೆಸಿಎಫ್ ಬಹರೈನ್: ಭಾರತದ 78ನೇ ಸ್ವಾತಂತ್ರ್ಯೋತ್ಸವ ಸಂಗಮ

ಮನಾಮ: “ವೈವಿಧ್ಯತೆ ನಮ್ಮ ದೇಶದ ಆತ್ಮ” ಎಂಬ ಘೋಷ ವಾಕ್ಯದೊಂದಿಗೆ ಭಾರತದ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಕಾರ್ಯಕ್ರಮವು ಕೆಸಿಎಫ್ ಬಹರೈನ್ ರಾಷ್ಟ್ರೀಯ ಸಮಿತಿಯ ಅಧ್ಯಕ್ಷ ಜಮಾಲುದ್ದೀನ್ ವಿಟ್ಲ ಅಧ್ಯಕ್ಷತೆಯಲ್ಲಿ ಕೆಸಿಎಫ್ ಸೆಂಟ್ರಲ್ ಕಚೇರಿ ಗುದೈಬಿಯಾದಲ್ಲಿ ನಡೆಯಿತು.

ಕೆಸಿಎಫ್ ಮನಾಮ ಸೆಕ್ಟರ್ ಅಧ್ಯಕ್ಷರಾದ ಅಹ್ಮದ್ ಉಸ್ತಾದ್ ದುಆ ಗೈದರು. ದಾರುಲ್ ಹುದಾ ತಂಬಿನಮಕ್ಕಿ ಸ್ಥಾಪನೆಯ ಸಾರಥಿ‌ ಖಲೀಲ್ ಹಿಮಮಿ ಸಖಾಫಿ ಕೊಟ್ಟಮುಡಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕೆಸಿಎಫ್ ರಾಷ್ಟ್ರೀಯ ಸಮಿತಿಯ ಅಧ್ಯಕ್ಷ ಜಮಾಲುದ್ದೀನ್ ವಿಟ್ಲ ಅಧ್ಯಕ್ಷೀಯ ಭಾಷಣ ಮಾಡಿದರು.

ಕೆಸಿಎಫ್ ರಾಷ್ಟ್ರೀಯ ಸಮಿತಿಯ ಪ್ರಧಾನ ಕಾರ್ಯದರ್ಶಿ ಹಾರಿಸ್ ಸಂಪ್ಯ ಸ್ವಾತಂತ್ರ್ಯೋತ್ಸವದ ಸಂದೇಶ ಭಾಷಣ ಮಾಡಿದರು. ಕಾರ್ಯಕ್ರಮದಲ್ಲಿ ಅನಿವಾಸಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತ ರಾಜ್ ಕುಮಾರ್ ಹಾಗೂ ರಮೇಶ್ ರಾಮಚಂದ್ರನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.

ಕೆಸಿಎಫ್ ಗುದೈಬಿಯಾ ಸೆಕ್ಟರ್ ಉಪಾಧ್ಯಕ್ಷರಾದ ಶಿಹಾಬ್ ಉಸ್ತಾದ್ ಪರಪ್ಪ ಹಾಗೂ ರಾಷ್ಟ್ರೀಯ ಸಮಿತಿ ಸಂಘಟನಾ ಇಲಾಖೆ ಅಧ್ಯಕ್ಷ ಖಲಂದರ್ ಉಸ್ತಾದ್ ಶುಭ ಹಾರೈಸಿದರು. ರಾಷ್ಟ್ರೀಯ ಸಮಿತಿ ಪಬ್ಲಿಕೇಶನ್ ವಿಂಗ್ ಕಾರ್ಯದರ್ಶಿ ತೌಫೀಖ್ ಬೆಳ್ತಂಗಡಿ ಸ್ವಾಗತಿಸಿದರು. ರಾಷ್ಟ್ರೀಯ ಸಮಿತಿ ಪಬ್ಲಿಕೇಶನ್ ವಿಂಗ್ ಅಧ್ಯಕ್ಷ‌ ಲತೀಫ್ ಪೆರೋಲಿ ಕಾರ್ಯಕ್ರಮ ನಿರೂಪಿಸಿದರು. ರಾಷ್ಟ್ರೀಯ ಸಮಿತಿ ಶಿಕ್ಷಣ ಇಲಾಖೆ ಕಾರ್ಯದರ್ಶಿ ಅಶ್ರಫ್ ರೆಂಜಾಡಿ ರಾಷ್ಟ್ರ ಗೀತೆ ಹಾಡಿದರು. ರಾಷ್ಟ್ರೀಯ ಸಮಿತಿ ಕೋಶಾಧಿಕಾರಿ ಸೂಫಿ ಪೈಂಬಚ್ಚಾಲ್ ಧನ್ಯವಾದ ಸಮರ್ಪಿಸಿದರು.

Hot this week

ಬಹರೈನ್ ಕನ್ನಡ ಸಂಘದಿಂದ 79ನೇ ಸ್ವಾತಂತ್ರ್ಯ ದಿನಾಚರಣೆ

ಬಹರೈನ್: ಭಾರತದ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಗಸ್ಟ್ 15ರಂದು ಬೆಳಗ್ಗೆ 8:30ಕ್ಕೆ...

ಬಹರೈನ್ ರೇಡಿಯೋ ಆರ್ ಜೆ ಕಮಲಾಕ್ಷ ಅಮೀನ್​ಗೆ ‘ಗೋಲ್ಡನ್ ಐಕಾನಿಕ್ ಅವಾರ್ಡ್’ ಗೌರವ ಪ್ರಶಸ್ತಿ

ಮಂಗಳೂರು: ಬಹರೈನ್ ನ ಕಸ್ತೂರಿ ಕನ್ನಡ ಎಫ್ಎಂ ರೇಡಿಯೋ ಆರ್ ಜೆ...

ಮಸ್ಕತ್‌ನಲ್ಲಿ ‘ಕನ್ನಡ ಭವನ’ ನಿರ್ಮಾಣಕ್ಕೆ ಕರ್ನಾಟಕ ಸರಕಾರದಿಂದ ಆರ್ಥಿಕ ನೆರವು ಬೇಕು: ‘ಮಸ್ಕತ್ ಕನ್ನಡ ಸಂಘ’ದ ಅಧ್ಯಕ್ಷ ಮಂಜುನಾಥ್ ಸಂಗಟಿ

ವಿಶೇಷ ಸಂದರ್ಶನ; ಎಂ.ಇಕ್ಬಾಲ್ ಉಚ್ಚಿಲ, ದುಬೈ ನಿಸರ್ಗ ನಿರ್ಮಿತ ರಮ್ಯ ಮನೋಹರ ತಾಣವಾಗಿರುವ...

Related Articles

Popular Categories