ಕುವೈತ್ಪ್ರಧಾನಿ ನರೇಂದ್ರ ಮೋದಿಗೆ ಕುವೈತ್‌ನಲ್ಲಿ ಭವ್ಯ ಸ್ವಾಗತ

ಪ್ರಧಾನಿ ನರೇಂದ್ರ ಮೋದಿಗೆ ಕುವೈತ್‌ನಲ್ಲಿ ಭವ್ಯ ಸ್ವಾಗತ

ಕುವೈತ್‌: ಪ್ರಧಾನಿ ನರೇಂದ್ರ ಮೋದಿಯವರು ಕುವೈಟ್‌ ಗೆ ಪ್ರವಾಸಕ್ಕೆಂದು ತೆರಳಿದ್ದು, ಈ ವೇಳೆ ಅಲ್ಲಿನ ಅಧಿಕಾರಿಗಳು ಮತ್ತು ಭಾರತೀಯ ವಲಸಿಗರು ಅವರನ್ನು ಆದರದಿಂದ ಸ್ವಾಗತಿಸಿದರು. ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಹಾಗೂ ಶುಭಾಶಯಗಳೊಂದಿಗೆ ಪ್ರಧಾನಿಯವರನ್ನು ಬರ ಮಾಡಿಕೊಳ್ಳಲಾಯಿತು.

ಕುವೈತ್ ಸಿಟಿಯ ಹೋಟೆಲ್‌ನಲ್ಲಿ ಭಾರತೀಯ ವಲಸಿಗರೊಂದಿಗೆ ಮೋದಿ ಸಂವಾದ ನಡೆಸಿದರು. ಕಲಾವಿದರಿಂದ ನಡೆದ ಸಾಂಸ್ಕೃತಿಕ ಕಾರ್ಯಕ್ರಮವನ್ನು ವೀಕ್ಷಿಸಿದರು.

ಕುವೈತ್ ರಾಜ್ಯದ ಅಮೀರ್ ಶೇಖ್ ಮೆಶಾಲ್ ಅಲ್ ಅಹ್ಮದ್ ಅಲ್ ಜಬರ್ ಅಲ್ ಸಬಾಹ್ ಅವರ ಆಹ್ವಾನದ ಮೇರೆಗೆ ಪ್ರಧಾನ ಮಂತ್ರಿ ಅವರು ಗಲ್ಫ್ ರಾಷ್ಟ್ರವಾದ ಕುವೈತ್‌ಗೆ ಎರಡು ದಿನಗಳ ಭೇಟಿ ನೀಡಿದ್ದಾರೆ. 43 ವರ್ಷಗಳಲ್ಲಿ ಕುವೈತ್‌ಗೆ ಭಾರತದ ಪ್ರಧಾನಿಯೊಬ್ಬರು ನೀಡಿದ ಮೊದಲ ಭೇಟಿ ಇದಾಗಿದೆ.

ಅವರ ಆಗಮನದ ನಂತರ ಮೋದಿ ಅವರು 101 ವರ್ಷದ ಮಾಜಿ ಐಎಫ್‌ಎಸ್ ಅಧಿಕಾರಿ ಮಂಗಲ್ ಸೈನ್ ಹಂಡಾ ಅವರನ್ನು ಭೇಟಿಯಾದರು.

“ಇದು ಜೀವಮಾನದ ಅನುಭವ. ವಿಶೇಷವಾಗಿ ಮಂಗಲ್ ಸೈನ್ ಹಂಡಾರನ್ನು ಭೇಟಿ ಮಾಡಲು ಇಲ್ಲಿಗೆ ಬಂದಿದ್ದೇನೆ ಎಂದು ಮೋದಿ ಹೇಳಿದರು. ನಾವು ಪ್ರಧಾನಿ ಮೋದಿಯವರಿಗೆ ಕೃತಜ್ಞರಾಗಿರುತ್ತೇವೆ” ಎಂದು ಮಾಜಿ ಐಎಫ್‌ಎಸ್ ಅಧಿಕಾರಿಯ ಪುತ್ರ ದಿಲೀಪ್ ಹಂಡಾ ಹೇಳಿದ್ದಾರೆ.

ಅವರ 100 ನೇ ಹುಟ್ಟುಹಬ್ಬದಂದು ಮಾಜಿ ಐಎಫ್‌ಎಸ್ ಅಧಿಕಾರಿಗೆ ಮೋದಿ ಅಭಿನಂದನಾ ಪತ್ರವನ್ನು ಕಳುಹಿಸಿದ್ದಾರೆ ಎಂದು ಅವರ ಪುತ್ರ ಪ್ರದೀಪ್ ಹಂಡಾ ನೆನಪಿಸಿಕೊಂಡರು.

“ನಾನು ಸುಮಾರು 40 ವರ್ಷಗಳಿಂದ ಕುವೈತ್‌ನಲ್ಲಿದ್ದೇನೆ. ನಾನು ಕುವೈತ್‌ನ ಅತಿದೊಡ್ಡ ಬ್ಯಾಂಕ್‌ಗಳಲ್ಲಿ ಒಂದಾದ ನ್ಯಾಷನಲ್ ಬ್ಯಾಂಕ್ ಆಫ್ ಕುವೈತ್‌ನ ಜನರಲ್ ಮ್ಯಾನೇಜರ್ ಆಗಿದ್ದೇನೆ… ಇದು ತುಂಬಾ ರೋಮಾಂಚನಕಾರಿ ಅನುಭವವಾಗಿದ್ದು, ಪ್ರಧಾನಿ ಮೋದಿ ಅವರು ತಂದೆಯನ್ನು ಭೇಟಿಯಾಗಲು ಬಯಸುತ್ತಿದ್ದಾರೆ ಎಂದು ರಾಯಭಾರಿಯಿಂದ ನನಗೆ ಕರೆ ಬಂದಿದೆ. ನನ್ನ ತಂದೆಯ 100 ನೇ ಹುಟ್ಟುಹಬ್ಬದಂದು ಭೇಟಿ ಮಾಡಿ, ಪ್ರಧಾನಿ ಅಭಿನಂದನೆಗಳ ಪತ್ರವನ್ನು ಕಳುಹಿಸಿದ್ದಾರೆ” ಎಂದು ಅವರು ಹೇಳಿದರು.

Hot this week

ಜರ್ಮನಿಯಲ್ಲಿ ಅದ್ಧೂರಿಯಾಗಿ ನೆರವೇರಿದ ಜಾನಪದ ವೈಭವ; ಸಂಸ್ಕೃತಿಯ ಗತ ವೈಭವ ಸೃಷ್ಟಿ

ಜರ್ಮನಿ: ರೈನ್ ಮೈನ್ ಕನ್ನಡ ಸಂಘದಿಂದ ಇದೇ ಮೊದಲ ಬಾರಿಗೆ ಶನಿವಾರ...

ಕನ್ನಡ ಸಂಘ ಬಹರೈನ್‌ನಿಂದ ಆರೋಗ್ಯ ದಿನ; ಉಚಿತ ವೈದ್ಯಕೀಯ ಶಿಬಿರ

ಬಹರೈನ್: ಕನ್ನಡ ಸಂಘ ಬಹರೈನ್ ವತಿಯಿಂದ ಅಲ್ ಹಿಲಾಲ್ ಹೆಲ್ತ್ ಕೇರ್...

ಕರ್ನಾಟಕ ಸಂಘ ಖತರ್‌ಗೆ ನೂತನ ಆಡಳಿತ ಸಮಿತಿ ಆಯ್ಕೆ; 2026–2028 ಅವಧಿಗೆ 15ನೇ ಅಧ್ಯಕ್ಷರಾಗಿ ಸುಬ್ರಮಣ್ಯ ಹೆಬ್ಬಾಗಿಲು ಅವಿರೋಧ ಆಯ್ಕೆ

ದೋಹಾ: ಭಾರತೀಯ ಸಾಂಸ್ಕೃತಿಕ ಕೇಂದ್ರ (ICC) ಆಶ್ರಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಮುಖ ಭಾರತೀಯ...

ಖತರ್‌ ಕರ್ನಾಟಕ ಸಂಘದಿಂದ ‘ತಾಯಂದಿರ ದಿನ 2026’ ಆಚರಣೆ

ದೋಹಾ(ಖತರ್‌): ಕರ್ನಾಟಕ ಸಂಘ ಖತರ್‌ (KSQ), ಭಾರತೀಯ ಸಾಂಸ್ಕೃತಿಕ ಕೇಂದ್ರ (ICC)...

ಮೇ 15ರಂದು ಬಹರೈನ್ ಕನ್ನಡ ಸಂಘದ ಆಶ್ರಯದಲ್ಲಿ ಉಚಿತ ವೈದ್ಯಕೀಯ ಶಿಬಿರ

ಕನ್ನಡ ಸಂಘ ಬಹರೈನ್ ಆಶ್ರಯದಲ್ಲಿ ಅಲ್ ಹಿಲಾಲ್ ಹೆಲ್ತ್ ಕೇರ್ ಗ್ರೂಪ್...

Related Articles

Popular Categories