ಒಮಾನ್ಒಮಾನ್ ಕರಾವಳಿಯಲ್ಲಿ ಮುಳುಗಿದ ಹಡಗು: ಎಂಟು ಭಾರತೀಯರ ಸಹಿತ...

ಒಮಾನ್ ಕರಾವಳಿಯಲ್ಲಿ ಮುಳುಗಿದ ಹಡಗು: ಎಂಟು ಭಾರತೀಯರ ಸಹಿತ ಒಂಬತ್ತು ಮಂದಿಯ ರಕ್ಷಣೆ

ಹೊಸದಿಲ್ಲಿ: ಒಮನ್ ಕರಾವಳಿಯಲ್ಲಿ ಕಳೆದ ಭಾನುವಾರ ಮುಳುಗಿದ ಪ್ರೆಸ್ಟೀಜ್ ಫಾಲ್ಕನ್ ತೈಲ ಸಾಗಾಣಿಕೆ ಹಡಗಿನಲ್ಲಿದ್ದ 13 ಮಂದಿ ಭಾರತೀಯರ ಪೈಕಿ ಎಂಟು ಮಂದಿ ಸೇರಿದಂತೆ ಒಟ್ಟು ಒಂಬತ್ತು ಮಂದಿಯನ್ನು ರಕ್ಷಿಸಲಾಗಿದೆ. ರಕ್ಷಿಸಲ್ಪಟ್ಟ ಮತ್ತೊಬ್ಬ ಸಿಬ್ಬಂದಿ ಶ್ರೀಲಂಕಾ ಮೂಲದವರು ಎನ್ನಲಾಗಿದೆ.

“ಉಳಿದ ಸಿಬ್ಬಂದಿಯ ಹುಡುಕಾಟಕ್ಕಾಗಿ ಶೋಧ ಮತ್ತು ಪರಿಹಾರ ಕಾರ್ಯಾಚರಣೆ ಮುಂದುವರಿದಿದೆ. ಈಗಾಗಲೇ ಪತ್ತೆಯಾಗಿರುವ ಎಲ್ಲ ಒಂಬತ್ತು ಮಂದಿ ಮಸ್ಕತ್ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಜುಲೈ 14ರಂದು ರಾತ್ರಿ 10 ಗಂಟೆಯ ವೇಳೆಗೆ ಈ ಅವಘಡದ ಬಗ್ಗೆ ಪ್ರೆಸ್ಟೀಜ್ ಫಾಲ್ಕನ್ ಹಡಗಿನಿಂದ ಮಾಹಿತಿ ಸಿಕ್ಕಿತ್ತು. ಒಮಾನ್ ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಅಧಿಕಾರಿಗಳು ಒಮಾನ್ ಅಧಿಕಾರಿಗಳ ಜತೆ ಸಂಪರ್ಕದಲ್ಲಿದ್ದು, ಶೋಧ ಕಾರ್ಯಾಚರಣೆಯಲ್ಲಿ ಭಾರತೀಯ ನೌಕಾಪಡೆ ಕೂಡಾ ಕೈಜೋಡಿಸಿದೆ.

ಒಮಾನ್ ಕರಾವಳಿಯ ರಾಸ್ ಮದ್ರಖಾದಿಂದ 25 ನಾಟಿಕಲ್ ಮೈಲು ದೂರದಲ್ಲಿ ಹಡಗು ಮುಳುಗಿತ್ತು. ಹಡಗು ಇನ್ನೂ ಮುಳುಗಿದ ಸ್ಥಿತಿಯಲ್ಲೇ ಇದೆ. ಇದರಲ್ಲಿ ಸಾಗಿಸಲಾಗುತ್ತಿದ್ದ ತೈಲ ಸಮುದ್ರಕ್ಕೆ ಸೋರಿಕೆಯಾಗಿದೆಯೇ ಎನ್ನುವುದು ಇನ್ನೂ ಸ್ಪಷ್ಟವಾಗಿಲ್ಲ.

Hot this week

ಭಾರತದ ನೂತನ ಕಾನ್ಸುಲ್ ಜನರಲ್ ಡಾ.ವಿಷ್ಣುವರ್ಧನ ರೆಡ್ಡಿಗೆ ಕನ್ನಡಿಗರ ಕೂಟ ದುಬೈಯಿಂದ ಸ್ವಾಗತ

ದುಬೈ: ಯುಎಇಯ ಪ್ರತಿಷ್ಠಿತ ಕನ್ನಡ ಸಂಘಟನೆಗಳಲ್ಲಿ ಒಂದಾಗಿರುವ ಕನ್ನಡಿಗರ ಕೂಟ, ದುಬೈ...

ಭಾರತದ 80ನೇ ಸ್ವಾತಂತ್ರೋತ್ಸವದ ಸವಿನೆನಪಿಗಾಗಿ ರಕ್ತದಾನದಿಂದ ಮಾನವೀಯತೆಯ ಸಂದೇಶ ಸಾರಿದ ಕರ್ನಾಟಕ ಸಂಘ ಶಾರ್ಜಾ

ದುಬೈ: ಭಾರತದ 80ನೇ ಸ್ವಾತಂತ್ರೋತ್ಸವದ ಸವಿನೆನಪಿಗಾಗಿ ಕರ್ನಾಟಕ ಸಂಘ ಶಾರ್ಜಾ ಮತ್ತು...

ಸಲಾಲದ ಅಲ್ ನೂರ್ ಎಜುಕೇಶನ್ ಸೆಂಟರ್‌ನಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಸಲಾಲ(ಒಮಾನ್): ಸಲಾಲದ ಅಲ್ ನೂರ್ ಎಜುಕೇಶನ್ ಸೆಂಟರ್ ನಲ್ಲಿ ಬ್ಯಾರೀಸ್ ಕಮ್ಯುನಿಟಿ...

ಭಾರತದ 80ನೇ ಸ್ವಾತಂತ್ರ್ಯೋತ್ಸವದಲ್ಲಿ ಕರ್ನಾಟಕ ಸಂಘ ಖತರ್‌ನ ಅದ್ದೂರಿ ಭಾಗವಹಿಸುವಿಕೆ

ದೋಹಾ(ಖತರ್): ಭಾರತದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಭಾರತೀಯ ರಾಯಭಾರ ಕಚೇರಿ ದೋಹಾ...

ಬಹರೈನ್; ಆಗಸ್ಟ್ 21ರಂದು ‘ಕೆಸಿಎಫ್’ನಿಂದ ಗ್ರ್ಯಾಂಡ್ ಮೀಲಾದ್ ಕಾನ್ಫರೆನ್ಸ್

ಮನಾಮ: ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ಬಹರೈನ್ ರಾಷ್ಟ್ರೀಯ ಸಮಿತಿಯ ವತಿಯಿಂದ...

Related Articles

Popular Categories