ಸೌದಿ ಅರೇಬಿಯಾಜಿದ್ದಾ ವಿಮಾನ ನಿಲ್ದಾಣದಲ್ಲಿ ಮಂಗಳೂರಿಗೆ ಹೊರಟಿದ್ದ ವ್ಯಕ್ತಿ ಹೃದಯಾಘಾತದಿಂದ...

ಜಿದ್ದಾ ವಿಮಾನ ನಿಲ್ದಾಣದಲ್ಲಿ ಮಂಗಳೂರಿಗೆ ಹೊರಟಿದ್ದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು

ಸೌದಿ: ಗುರುವಾರ ರಾತ್ರಿ ಜಿದ್ದಾದಿಂದ ಮಂಗಳೂರಿಗೆ ಏರ್ ಇಂಡಿಯಾ ಎಕ್ಸ್ ಪ್ರೆಸ್ ನಲ್ಲಿ ಪ್ರಯಾಣಿಸಬೇಕಿದ್ದ ಬೆಳ್ತಂಗಡಿಯ ಹಿದಾಯತ್ ಎಂಬವರು ಜಿದ್ದಾ ವಿಮಾನ ನಿಲ್ದಾಣದಲ್ಲಿಯೇ ಹೃದಯಾಘಾತದಿಂದ ಮೃತರಾಗಿರುವ ಘಟನೆ ವರದಿಯಾಗಿದೆ.

ನಿನ್ನೆ ರಾತ್ರಿ 8:10ರ ಏರ್ ಇಂಡಿಯಾ ವಿಮಾನದಲ್ಲಿ ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸಬೇಕಿದ್ದ ಬೆಳ್ತಂಗಡಿ ಸಂಜಯನಗರ ನಿವಾಸಿ ಹಿದಾಯತ್ ಗೆ, ಜಿದ್ದಾ ಏರ್ ಪೋರ್ಟ್ ತಲುಪುತ್ತಿದ್ದಂತೆ ಎದೆ ನೋವು ಕಾಣಿಸಿಕೊಂಡಿತು. ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅಲ್ಲಿ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಮೃತರು ತಂದೆ-ತಾಯಿ, ಪತ್ನಿ ಹಾಗೂ ಒಂದು ಗಂಡು, ಮೂರು ಹೆಣ್ಣು ಮಕ್ಕಳು ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

Hot this week

ಸೋಲೋ ವಿಶ್ವ ಮೋಟಾರ್‌ಸೈಕಲ್ ಯಾತ್ರಿಕ ಗೇಬ್ರಿಯಲ್ ಶರತ್​​ರನ್ನು ಗೌರವಿಸಿದ ಕರ್ನಾಟಕ ಸಂಘ ಖತರ್

ದೋಹಾ: ಭಾರತೀಯ ಸಮುದಾಯಕ್ಕೆ ಹೆಮ್ಮೆಯ ಕ್ಷಣವಾಗುವಂತೆ, ಮಂಗಳೂರಿನ ಸಾಹಸಿ ಸೋಲೋ ವಿಶ್ವ...

ಕನ್ನಡ ಸಂಘ ಬಹರೈನ್‌ಗೆ ಪ್ರತಿಷ್ಠಿತ “ನವ ಕರ್ನಾಟಕ ರತ್ನ” ಪ್ರಶಸ್ತಿ

ಬೆಂಗಳೂರು: ಕನ್ನಡ ಭಾಷೆ, ನಾಡು-ನುಡಿ, ಕಲೆ, ಸಂಸ್ಕೃತಿ ಹಾಗೂ ಹೊರನಾಡಿನಲ್ಲಿ ಕನ್ನಡಿಗರ...

ದುಬೈಯಲ್ಲಿ ದಾಸವಾಣಿಯ ಸೊಬಗನ್ನು ಸಾರಿದ 27ನೇ ಹರಿನಾಮ ಸಂಕೀರ್ತನೆ

ದುಬೈ: ಕಳೆದ ನಾಲ್ಕು ದಶಕಗಳಿಂದ ದುಬೈಯಲ್ಲಿ ನೆಲೆಸಿದ್ದು, ಆಸಕ್ತರಿಗೆ ಕರ್ನಾಟಕ ಶಾಸ್ತ್ರೀಯ...

ಬಹರೈನ್‌; ಅ.9ರಂದು ಶ್ರೀ ನಾರಾಯಣ ಗುರು ಜಯಂತಿ ಅಂಗವಾಗಿ ‘Tribute to Bahrain’ ವಿಶೇಷ ಕಾರ್ಯಕ್ರಮ

ಮನಾಮಾ: ಬದುಕನ್ನು ಕಟ್ಟಿಕೊಳ್ಳಲು, ಕನಸುಗಳನ್ನು ನನಸಾಗಿಸಿಕೊಳ್ಳಲು ಹಾಗೂ ಭವಿಷ್ಯಕ್ಕೆ ಹೊಸ ದಿಕ್ಕು...

‘ಕನ್ನಡ ಸಂಘ ಬಹರೈನ್’ನಿಂದ ‘ಯಕ್ಷ ವೈಭವ 2026’: ಅದ್ಧೂರಿ ಯಕ್ಷಗಾನ ಪ್ರದರ್ಶನ

ಬಹರೈನ್: ಕನ್ನಡ ಸಂಘ ಬಹರೈನ್ ವತಿಯಿಂದ ಆಯೋಜಿಸಲಾದ “ಯಕ್ಷ ವೈಭವ 2026...

Related Articles

Popular Categories