ಬಹರೈನ್ಕನ್ನಡ ಸಂಘ ಬಹರೈನ್‌ಗೆ 1 ಕೋಟಿ ರೂಪಾಯಿಗಳ ಅನುದಾನ;...

ಕನ್ನಡ ಸಂಘ ಬಹರೈನ್‌ಗೆ 1 ಕೋಟಿ ರೂಪಾಯಿಗಳ ಅನುದಾನ; ಮುಖ್ಯಮಂತ್ರಿಗಳ ಅನುಮೋದನೆ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ವಿಶೇಷ ಶಿಫಾರಸಿನ ಮೇರೆಗೆ, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕನ್ನಡ ಸಂಘ ಬಹರೈನ್‌ಗೆ ಒಂದು ಕೋಟಿ ರೂಪಾಯಿಗಳ ಅನುದಾನವನ್ನು ಅಧಿಕೃತವಾಗಿ ಅನುಮೋದಿಸಿದ್ದಾರೆ.

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ವಿಧಾನ ಪರಿಷತ್ತಿನ ನೂತನ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ, ಅನಿವಾಸಿ ಭಾರತೀಯ ಸಮಿತಿ – ಕರ್ನಾಟಕ ಇದರ ಉಪಾಧ್ಯಕ್ಷೆ ಡಾ. ಆರತಿ ಕೃಷ್ಣ ಅವರ ಉಪಸ್ಥಿತಿಯಲ್ಲಿ ಕನ್ನಡ ಸಂಘದ ಅಧ್ಯಕ್ಷ ಅಜಿತ್ ಬಂಗೇರ ಅವರು ಮುಖ್ಯಮಂತ್ರಿಗಳಿಗೆ ಅನುದಾನಕ್ಕಾಗಿ ಮನವಿ ಸಲ್ಲಿಸಿದ್ದರು.

ಶುಕ್ರವಾರ ಕನ್ನಡ ಸಂಘದ ಅಧ್ಯಕ್ಷ ಅಜಿತ್ ಬಂಗೇರ ಅವರ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು, ಕರ್ನಾಟಕ ಸರಕಾರದ ಅನುದಾನ ನಿಧಿಯಿಂದ ಅನುದಾನವನ್ನು ಬಿಡುಗಡೆ ಮಾಡಲು ಅನುಮತಿ ನೀಡಿದ್ದಾರೆ.

ಇತ್ತೀಚೆಗೆ ಬಹರೈನ್ ಕನ್ನಡ ಸಂಘ ಕಟ್ಟಡ ಸಮುಚ್ಚಯ ‘ವಿದೇಶದಲ್ಲಿ ನಿರ್ಮಿತ ಪ್ರಥಮ ಕನ್ನಡ ಭವನ’ವನ್ನು ಭೇಟಿ ಮಾಡಿದ ಸಂದರ್ಭದಲ್ಲಿ, ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಸಂಘದ ಮೂಲಭೂತ ಅಗತ್ಯಗಳು ಮತ್ತು ಅಭಿವೃದ್ಧಿ ಕಾರ್ಯಗಳಿಗಾಗಿ ಧನಸಹಾಯ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿದ್ದರು.

ಮುಖ್ಯಮಂತ್ರಿಗಳ ಈ ಅನುಮೋದನೆಯೊಂದಿಗೆ, ಕನ್ನಡ ಸಂಘ ಬಹರೈನ್ ತನ್ನ ಮೂಲಸೌಕರ್ಯ, ಅಭಿವೃದ್ಧಿ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳನ್ನು ಮತ್ತಷ್ಟು ಬಲಪಡಿಸಲು ಮಹತ್ವದ ನೆರವನ್ನು ಪಡೆಯಲಿದೆ. ಈ ಹಿನ್ನೆಲೆಯಲ್ಲಿ ಸಂಘದ ಅಧ್ಯಕ್ಷ ಅಜಿತ್ ಬಂಗೇರ ಅವರು ವೈಯಕ್ತಿಕವಾಗಿ ಹಾಗೂ ಬಹರೈನ್ ಕನ್ನಡಿಗರ ಪರವಾಗಿ ಮುಖ್ಯಮಂತ್ರಿಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

Hot this week

ಸೋಲೋ ವಿಶ್ವ ಮೋಟಾರ್‌ಸೈಕಲ್ ಯಾತ್ರಿಕ ಗೇಬ್ರಿಯಲ್ ಶರತ್​​ರನ್ನು ಗೌರವಿಸಿದ ಕರ್ನಾಟಕ ಸಂಘ ಖತರ್

ದೋಹಾ: ಭಾರತೀಯ ಸಮುದಾಯಕ್ಕೆ ಹೆಮ್ಮೆಯ ಕ್ಷಣವಾಗುವಂತೆ, ಮಂಗಳೂರಿನ ಸಾಹಸಿ ಸೋಲೋ ವಿಶ್ವ...

ಕನ್ನಡ ಸಂಘ ಬಹರೈನ್‌ಗೆ ಪ್ರತಿಷ್ಠಿತ “ನವ ಕರ್ನಾಟಕ ರತ್ನ” ಪ್ರಶಸ್ತಿ

ಬೆಂಗಳೂರು: ಕನ್ನಡ ಭಾಷೆ, ನಾಡು-ನುಡಿ, ಕಲೆ, ಸಂಸ್ಕೃತಿ ಹಾಗೂ ಹೊರನಾಡಿನಲ್ಲಿ ಕನ್ನಡಿಗರ...

ದುಬೈಯಲ್ಲಿ ದಾಸವಾಣಿಯ ಸೊಬಗನ್ನು ಸಾರಿದ 27ನೇ ಹರಿನಾಮ ಸಂಕೀರ್ತನೆ

ದುಬೈ: ಕಳೆದ ನಾಲ್ಕು ದಶಕಗಳಿಂದ ದುಬೈಯಲ್ಲಿ ನೆಲೆಸಿದ್ದು, ಆಸಕ್ತರಿಗೆ ಕರ್ನಾಟಕ ಶಾಸ್ತ್ರೀಯ...

ಬಹರೈನ್‌; ಅ.9ರಂದು ಶ್ರೀ ನಾರಾಯಣ ಗುರು ಜಯಂತಿ ಅಂಗವಾಗಿ ‘Tribute to Bahrain’ ವಿಶೇಷ ಕಾರ್ಯಕ್ರಮ

ಮನಾಮಾ: ಬದುಕನ್ನು ಕಟ್ಟಿಕೊಳ್ಳಲು, ಕನಸುಗಳನ್ನು ನನಸಾಗಿಸಿಕೊಳ್ಳಲು ಹಾಗೂ ಭವಿಷ್ಯಕ್ಕೆ ಹೊಸ ದಿಕ್ಕು...

‘ಕನ್ನಡ ಸಂಘ ಬಹರೈನ್’ನಿಂದ ‘ಯಕ್ಷ ವೈಭವ 2026’: ಅದ್ಧೂರಿ ಯಕ್ಷಗಾನ ಪ್ರದರ್ಶನ

ಬಹರೈನ್: ಕನ್ನಡ ಸಂಘ ಬಹರೈನ್ ವತಿಯಿಂದ ಆಯೋಜಿಸಲಾದ “ಯಕ್ಷ ವೈಭವ 2026...

Related Articles

Popular Categories