ಬಹರೈನ್ಬಹರೈನ್ ಕನ್ನಡ ಸಂಘದ ಸಕ್ರಿಯ ಸದಸ್ಯ ಯಕ್ಷಿತ್ ಶೆಟ್ಟಿಗೆ...

ಬಹರೈನ್ ಕನ್ನಡ ಸಂಘದ ಸಕ್ರಿಯ ಸದಸ್ಯ ಯಕ್ಷಿತ್ ಶೆಟ್ಟಿಗೆ ಬೀಳ್ಕೊಡುಗೆ-ಸನ್ಮಾನ ಸಮಾರಂಭ

ಬಹರೈನ್‌: ಕನ್ನಡ ಸಂಘ ಬಹರೈನ್ ವತಿಯಿಂದ ಸಂಘದ ಸಕ್ರಿಯ ಸದಸ್ಯರಾದ ಯಕ್ಷಿತ್ ಶೆಟ್ಟಿ ಅವರ ಬೀಳ್ಕೊಡುಗೆ ಮತ್ತು ಸನ್ಮಾನ ಸಮಾರಂಭವನ್ನು ಬುಧವಾರದಂದು ಕನ್ನಡ ಭವನದ ಡಾ.ರೊನಾಲ್ಡ್ ಕೊಲಾಸೋ ಲೌಂಜ್ ನಲ್ಲಿ ಆಯೋಜಿಸಲಾಯಿತು.

ಕನ್ನಡ ಸಂಘ ಬಹರೈನ್‌ನ ಸಾಂಸ್ಕೃತಿಕ, ಸಾಮಾಜಿಕ ಹಾಗೂ ಸಂಘಟನಾ ಚಟುವಟಿಕೆಗಳಲ್ಲಿ ಯಕ್ಷಿತ್ ಶೆಟ್ಟಿ ಅವರು ನೀಡಿದ ಅಮೂಲ್ಯ ಸೇವೆ, ಸಮರ್ಪಣೆ ಹಾಗೂ ಸಕ್ರಿಯ ಭಾಗವಹಿಸುವಿಕೆಯನ್ನು ಗುರುತಿಸಿ ಈ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಕನ್ನಡ ಸಂಘ ಬಹರೈನ್ ಅಧ್ಯಕ್ಷ ಅಜಿತ್ ಬಂಗೇರ ಹಾಗೂ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳು ಯಕ್ಷಿತ್ ಶೆಟ್ಟಿ ಅವರಿಗೆ ಹಾರ, ಶಾಲು, ಸ್ಮರಣಿಕೆಯಿಂದ ಕೃತಜ್ಞತೆಯ ಸಂಕೇತವಾಗಿ ಗೌರವ ಸಲ್ಲಿಸಿದರು.

ಸಮಾರಂಭದಲ್ಲಿ ಮಾತನಾಡಿದ ಅಧ್ಯಕ್ಷ ಅಜಿತ್ ಬಂಗೇರ, ಪದಾಧಿಕಾರಿಗಳು ಮತ್ತು ಸದಸ್ಯರು, ಸಂಘದ ಅಭಿವೃದ್ಧಿಗೆ ಅವರ ಕೊಡುಗೆಯನ್ನು ಸ್ಮರಿಸಿ, ಅವರ ಸೇವಾಭಾವನೆ ಹಾಗೂ ಬದ್ಧತೆಯನ್ನು ಶ್ಲಾಘಿಸಿದರು. ಹಾಜರಿದ್ದ ಸದಸ್ಯರು ಯಕ್ಷಿತ್ ಶೆಟ್ಟಿ ಅವರ ಮುಂದಿನ ವೃತ್ತಿಜೀವನ ಮತ್ತು ವೈಯಕ್ತಿಕ ಜೀವನಕ್ಕೆ ಹಾರ್ದಿಕ ಶುಭಾಶಯಗಳನ್ನು ಕೋರಿದರು.

ವರದಿ: ಕಮಲಾಕ್ಷ ಅಮೀನ್

Hot this week

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಸಂದ ಗೌರವ, ಅಮೇರಿಕದ ತುಳುವರಲ್ಲಿ ಸಂಭ್ರಮ!

ಅಮೇರಿಕ: ತುಳುನಾಡಿನ ಜನರ ಬಹುದಶಕಗಳ ಕನಸು ನನಸಾಗಿದೆ. ಸೆಪ್ಟೆಂಬರ್ 18, 2026ರಂದು...

ನ್ಯೂಯಾರ್ಕ್‌ನ ಆಲ್ಬನಿಯ ಸುಪ್ರಿಯಾ ಶೆಟ್ಟಿಗೆ ‘ಮಿಸ್ಸೆಸ್ ಅಕ್ಕ- 2026’ ಕಿರೀಟ

ಫಿಲಡೆಲ್ಫಿಯಾ: ಫಿಲಡೆಲ್ಫಿಯಾದಲ್ಲಿ ನಡೆದ ಅಕ್ಕ (AKKA) ರಜತ ಮಹೋತ್ಸವ ವಿಶ್ವ ಕನ್ನಡ...

ದುಬೈಯಲ್ಲಿ ಪದ್ಮಶಾಲಿ ಸಮುದಾಯದಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ; ಭಕ್ತಿ,ಸಂಸ್ಕೃತಿ ಹಾಗೂ ಸಮುದಾಯದ ಒಗ್ಗಟ್ಟಿಗೆ ಸಾಕ್ಷಿಯಾದ ಕಾರ್ಯಕ್ರಮ

ದುಬೈ, : ದುಬೈ ಪದ್ಮಶಾಲಿ ಸಮುದಾಯದ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆಯನ್ನು ಭಕ್ತಿ,...

ಬೆಂಗಳೂರು; ಕನ್ನಡಿಗರ ಕೂಟ, ದುಬೈಯಿಂದ ಪದ್ಮಶ್ರೀ ಭೀಮವ್ವ ದೊಡ್ಡಬಾಳಪ್ಪರಿಗೆ ಪ್ರತಿಷ್ಠಿತ ‘ಹುಟ್ಟೂರ ಸನ್ಮಾನ‌’ ಪ್ರದಾನ

ಬೆಂಗಳೂರು: ಕನ್ನಡಿಗರ ಕೂಟ, ದುಬೈ ವತಿಯಿಂದ ಬೆಂಗಳೂರಿನಲ್ಲಿ ನಡೆದ “ಹುಟ್ಟುೂರ ಸನ್ಮಾನ”...

ದುಬೈ; ಫಾರ್ಚೂನ್ ಗ್ರೂಪ್ ಆಫ್ ಹೋಟೆಲ್ ನಲ್ಲಿ ಓಣಂ ಹಬ್ಬ ಆಚರಣೆ

ದುಬೈ : ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ ಅವರ ಫಾರ್ಚೂನ್ ಗ್ರೂಪ್...

Related Articles

Popular Categories