ಯುಎಇತುಳುನಾಡಿನ ಆಚರಣೆಗಳಲ್ಲಿ ಮೂಡನಂಬಿಕೆ ವೈಭವೀಕರಣಕ್ಕೆ ಕಳವಳ ವ್ಯಕ್ತಪಡಿಸಿದ ಡಾ.ಸಂತೋಷ್...

ತುಳುನಾಡಿನ ಆಚರಣೆಗಳಲ್ಲಿ ಮೂಡನಂಬಿಕೆ ವೈಭವೀಕರಣಕ್ಕೆ ಕಳವಳ ವ್ಯಕ್ತಪಡಿಸಿದ ಡಾ.ಸಂತೋಷ್ ಗುರೂಜಿ

ದುಬೈ: ಅರಬ್ ಸಂಯುಕ್ತ ಸಂಸ್ಥಾನದ ವಾಣಿಜ್ಯ ನಗರಿ ದುಬೈಯಲ್ಲಿ ಯುಎಇ ಬಂಟ್ಸ್ ಮತ್ತು ಯುಎಇಯಲ್ಲಿರುವ ಕರ್ನಾಟಕ ಪರ ಸಂಘಟನೆಗಳ ಆಶ್ರಯದಲ್ಲಿ ಇತ್ತೀಚೆಗೆ ತುಳುನಾಡ ಸಂಸ್ಕೃತಿಯ ಅನಾವರಣ ಉಪನ್ಯಾಸ ಕಾರ್ಯಕ್ರಮ ಫಾರ್ಚೂನ್ ಪ್ಲಾಝಾ ಹೋಟೆಲ್ ಸಭಾಂಗಣದಲ್ಲಿ ನಡೆಯಿತು.

ಶ್ರೀ ಬಾರ್ಕೂರು ಮಹಾ ಸಂಸ್ಥಾನ (ಭಾರ್ಗವಬೀಡು ಬಾರ್ಕೂರು) ಪೀಠಾಧಿಪತಿ ಶ್ರೀ ಡಾ.ವಿದ್ಯಾವಾಚಾಸ್ಪತಿ ವಿಶ್ವಸಂತೋಷ ಭಾರತಿ ಶ್ರೀಪಾದರು ಪ್ರವಚನ ಹಾಗೂ ತುಳುನಾಡಿನ ಆಚಾರ ವಿಚಾರ ಸಂಸ್ಕೃತಿ ಸಂಪ್ರದಾಯಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದರು.

ಸುಮಂಗಲೆಯರ ಪೂರ್ಣ ಕುಂಭ ಹಾಗೂ ಚೆಂಡೆ ವಾದನದೊಂದಿಗೆ ಪರಮ ಪೂಜ್ಯ ಸ್ವಾಮಿಜಿಯವರನ್ನು ಬರಮಾಡಿಕೊಂಡು ಜ್ಯೋತಿ ಬೆಳಗುವುದರೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಅಬುಧಾಭಿ ಕರ್ನಾಟಕ ಸಂಘದ ಅಧ್ಯಕ್ಷ ಸರ್ವೋತ್ತಮ ಶೆಟ್ಟಿಯವರು ಸ್ವಾಗತ ಮತ್ತು ಪರಿಚಯ, ಯುಎಇ ಬಂಟ್ಸ್ ನ ಅಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿಯವರಿಂದ ಪ್ರಾಸ್ಥವಿಕ ಭಾಷಣದಲ್ಲಿ ಬಾರ್ಕೂರು ಮಹಾ ಸಂಸ್ಥಾನದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದರು.

ಶ್ರೀ ಡಾ.ವಿದ್ಯಾವಾಚಾಸ್ಪತಿ ವಿಶ್ವಸಂತೋಷ ಭಾರತಿ ಶ್ರೀಪಾದರಿಗೆ ಯುಎಇಯಲ್ಲಿ ಕಾರ್ಯೋನ್ಮುಖವಾಗಿರುವ ಸರ್ವ ಸಂಘಟನೆಗಳ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು. ಸನ್ಮಾನ ಪ್ರಕ್ರಿಯೆಯಲ್ಲಿ ಸರ್ವೋತ್ತಮ ಶೆಟಿ, ಪ್ರವೀಣ್ ಕುಮಾರ್ ಶೆಟ್ಟಿ, ದಿನೇಶ್ ಶೆಟ್ಟಿ ಕೊಟ್ಟಿಂಜ ಮತ್ತು ಬಿ.ಕೆ. ಗಣೇಶ್ ರೈಯವರು ಪಾಲ್ಗೊಂಡಿದ್ದರು.

ತುಳುನಾಡಿನ ಸಮಗ್ರ ಇತಿಹಾಸ ಮತ್ತು ಧಾರ್ಮಿಕ ಆಚರಣೆಗಳು, ದೈವಾರಾಧನೆ, ಭೂತಾರಾಧನೆ, ಅತ್ಯಂತ ಕ್ರಮಬದ್ಧವಾಗಿ ನಡೆಯುತಿದ್ದ ಸಾಂಪ್ರದಾಯಿಕ ವಿವಾಹಗಳು ಇಂದು ಹಾದಿ ತಪ್ಪಿ, ತುಳುನಾಡಿಗೆ ಸಂಬಂಧವಿಲ್ಲದೆ ಇರುವ ಆಚರಣೆಗೆ ಜೋತು ಬಿದ್ದು ಮೌಢ್ಯತೆಯಲ್ಲಿ ನಡೆಯುತ್ತಿರುವ ಆಚರಣೆಗೆ ಸ್ವಾಮೀಜಿಯವರು ಕಳವಳ ವ್ಯಕ್ತಪಡಿಸಿದರು.

ಸಭೆಯಲ್ಲಿ ಡಾ.ಬಿ.ಆರ್. ಶೆಟ್ಟಿಯವರು, ಡಾ.ಸಂತೋಷ್ ಗುರೂಜಿಯವರ ಸನಾತನ ಸಂಸ್ಕೃತಿಯನ್ನು ವಿಶ್ವದಾದ್ಯಂತ ಪಸರಿಸುವ ಕಾರ್ಯಕ್ಕೆ ತಮ್ಮ ಮೆಚ್ಚುಗೆಯನ್ನು ವ್ಯಕ್ತಪಡಿಸಿ ಶುಭವನ್ನು ಹಾರೈಸಿದರು. ರಾಜೇಶ ಕುತ್ತಾರ್ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರೂಪಿಸಿ ಸರ್ವರಿಗೂ ವಂದನೆಯನ್ನು ಸಲ್ಲಿಸಿದರು. ಕೊನೆಯಲ್ಲಿ ಸರ್ವರಿಗೂ ಉಪಹಾರದ ವ್ಯವಸ್ಥೆ ಏರ್ಪಡಿಸಲಾಗಿತ್ತು.

Hot this week

ಭಾರತದ 80ನೇ ಸ್ವಾತಂತ್ರೋತ್ಸವದ ಸವಿನೆನಪಿಗಾಗಿ ರಕ್ತದಾನದಿಂದ ಮಾನವೀಯತೆಯ ಸಂದೇಶ ಸಾರಿದ ಕರ್ನಾಟಕ ಸಂಘ ಶಾರ್ಜಾ

ದುಬೈ: ಭಾರತದ 80ನೇ ಸ್ವಾತಂತ್ರೋತ್ಸವದ ಸವಿನೆನಪಿಗಾಗಿ ಕರ್ನಾಟಕ ಸಂಘ ಶಾರ್ಜಾ ಮತ್ತು...

ಸಲಾಲದ ಅಲ್ ನೂರ್ ಎಜುಕೇಶನ್ ಸೆಂಟರ್‌ನಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಸಲಾಲ(ಒಮಾನ್): ಸಲಾಲದ ಅಲ್ ನೂರ್ ಎಜುಕೇಶನ್ ಸೆಂಟರ್ ನಲ್ಲಿ ಬ್ಯಾರೀಸ್ ಕಮ್ಯುನಿಟಿ...

ಭಾರತದ 80ನೇ ಸ್ವಾತಂತ್ರ್ಯೋತ್ಸವದಲ್ಲಿ ಕರ್ನಾಟಕ ಸಂಘ ಖತರ್‌ನ ಅದ್ದೂರಿ ಭಾಗವಹಿಸುವಿಕೆ

ದೋಹಾ(ಖತರ್): ಭಾರತದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಭಾರತೀಯ ರಾಯಭಾರ ಕಚೇರಿ ದೋಹಾ...

ಬಹರೈನ್; ಆಗಸ್ಟ್ 21ರಂದು ‘ಕೆಸಿಎಫ್’ನಿಂದ ಗ್ರ್ಯಾಂಡ್ ಮೀಲಾದ್ ಕಾನ್ಫರೆನ್ಸ್

ಮನಾಮ: ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ಬಹರೈನ್ ರಾಷ್ಟ್ರೀಯ ಸಮಿತಿಯ ವತಿಯಿಂದ...

ಭಾರತೀಯ ರಾಯಭಾರ ಕಚೇರಿಯ ಡಾ.ಈಶ್ ಸಿಂಘಾಲ್​​ಗೆ ಭಾವಪೂರ್ಣ ಬೀಳ್ಕೊಡುಗೆ; ಕರ್ನಾಟಕ ಸಂಘ ಖತರ್‌ನಿಂದ ಅಭಿನಂದನೆ

ದೋಹಾ(ಖತರ್): ಖತರ್‌ನಲ್ಲಿ ತಮ್ಮ ಸೇವಾವಧಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಭಾರತೀಯ ರಾಯಭಾರ ಕಚೇರಿಯ...

Related Articles

Popular Categories