ಖತರ್ಖತರ್‌ ಕರ್ನಾಟಕ ಸಂಘದ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಹೆಬ್ಬಾಗಿಲು ಅಧಿಕಾರ...

ಖತರ್‌ ಕರ್ನಾಟಕ ಸಂಘದ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಹೆಬ್ಬಾಗಿಲು ಅಧಿಕಾರ ಸ್ವೀಕಾರ

ದೋಹಾ(ಖತರ್):ಕರ್ನಾಟಕ ಸಂಘ ಖತರ್‌ನ 2026–2028 ಅವಧಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಸುಬ್ರಹ್ಮಣ್ಯ ಹೆಬ್ಬಾಗಿಲು ಅಧಿಕಾರ ಸ್ವೀಕರಿಸಿದ್ದು, ಖತರ್‌ನ ಕನ್ನಡ ಸಮುದಾಯದಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ.

ಅವರು ಈ ಜವಾಬ್ದಾರಿಯನ್ನು ಅತ್ಯಂತ ನಮ್ರತೆ ಮತ್ತು ಬದ್ಧತೆಯಿಂದ ಸ್ವೀಕರಿಸಿರುವುದಾಗಿ ತಿಳಿಸಿ, ಸಮುದಾಯಕ್ಕೆ ಸೇವೆ ಸಲ್ಲಿಸುವ ಅವಕಾಶ ದೊರೆತಿರುವುದು ಗೌರವದ ಸಂಗತಿಯಾಗಿದೆ ಎಂದು ಹೇಳಿದರು.

ನಿಕಟ ಪೂರ್ವ ಅಧ್ಯಕ್ಷರಾದ ರವಿ ಶೆಟ್ಟಿ ಹಾಗೂ ಆಡಳಿತ ಸಮಿತಿ (2024–2026) ಅವರ ಸೇವೆ ಮತ್ತು ಕೊಡುಗೆಗಳನ್ನು ಅವರು ಕೃತಜ್ಞತೆಯಿಂದ ಸ್ಮರಿಸಿದರು. ಅವರ ಶ್ರಮದಿಂದ ಸಂಘದ ಅಭಿವೃದ್ದಿಗೆ ಬಲವಾದ ಅಡಿಪಾಯ ನಿರ್ಮಾಣವಾಗಿದೆ ಎಂದು ಹೇಳಿದರು.

ಸಂಘದ ಎಲ್ಲಾ ಪೂರ್ವ ಅಧ್ಯಕ್ಷರಾದ ಸತೀಶ್ ದೇಶಪಾಂಡೆ, ನಾಗರಾಜ್, ಪ್ರಕಾಶ್ ಬಾಬು, ಕೆ. ಪ್ರಭಾಕರ್, ಅರವಿಂದ ಪಾಟೀಲ, ಅರುಣ್ ಕುಮಾರ್ ಕೆ.ಎಂ., ವಿ.ಎಸ್. ಮನ್ನಂಗಿ, ದೀಪಕ್ ಶೆಟ್ಟಿ, ಎಚ್.ಕೆ. ಮಧು, ವೆಂಕಟ್ ರಾವ್, ದಿವಂಗತ ಮೈರ್ಪಾಡಿ ನಾಗೇಶ್ ರಾವ್, ಸಂಜಯ ಕುದರಿ, ಮಹೇಶ್ ಗೌಡ ಹಾಗೂ ರವಿ ಶೆಟ್ಟಿ ಅವರ ಸೇವೆಯನ್ನು ಅವರು ಸ್ಮರಿಸಿ ಪ್ರಶಂಸಿಸಿದರು.

ಸಂಘದ ಎಲ್ಲಾ ಸಮಿತಿ ಸದಸ್ಯರು, ಸಮುದಾಯ ಮುಖಂಡರು ಮತ್ತು ಸದಸ್ಯರ ನಿರಂತರ ಸೇವೆ ಹಾಗೂ ಸಮರ್ಪಣೆಯನ್ನು ಅವರು ಶ್ಲಾಘಿಸಿದರು.

ಮುಂದಿನ ಅವಧಿಯಲ್ಲಿ ಕನ್ನಡ ಸಮುದಾಯದ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುವುದು, ಸಂಸ್ಕೃತಿಯನ್ನು ಉತ್ತೇಜಿಸುವುದು ಮತ್ತು ಎಲ್ಲರಿಗೂ ಅರ್ಥಪೂರ್ಣ ಅವಕಾಶಗಳನ್ನು ಸೃಷ್ಟಿಸುವುದು ತಮ್ಮ ಗುರಿಯಾಗಿದೆ ಎಂದು ಅವರು ತಿಳಿಸಿದರು.

ಒಗ್ಗಟ್ಟಿನಿಂದ ಮತ್ತು ಉದ್ದೇಶಪೂರ್ವಕವಾಗಿ ನಾವು ಮುಂದೆ ಸಾಗಿದರೆ, ಇನ್ನಷ್ಟು ಮೈಲಿಗಲ್ಲುಗಳನ್ನು ಸಾಧಿಸಬಹುದು ಎಂದು ಸುಬ್ರಹ್ಮಣ್ಯ ಹೆಬ್ಬಾಗಿಲು ವಿಶ್ವಾಸ ವ್ಯಕ್ತಪಡಿಸಿದರು.

ಕರ್ನಾಟಕ ಸಂಘ ಖತರ್ ಭಾರತೀಯ ರಾಯಭಾರ ಕಚೇರಿಯ ಅಡಿಯಲ್ಲಿ ಕಾರ್ಯನಿರ್ವಹಿಸುವ ಭಾರತೀಯ ಸಾಂಸ್ಕೃತಿಕ ಕೇಂದ್ರದ ಸಹಾಯಕ ಸಂಸ್ಥೆಯಾಗಿದ್ದು, ಖತರ್‌ನ ಕನ್ನಡಿಗರ ಪ್ರಮುಖ ವೇದಿಕೆಯಾಗಿದೆ.

Hot this week

ಜರ್ಮನಿ; ನಾಟ್ಯಫೆಸ್ಟ್ 2026: ಸಂಸ್ಕೃತಿ ಮತ್ತು ಸೃಜನಾತ್ಮಕತೆಯ ರಂಜಕ ವೇದಿಕೆ

ಫ್ರಾಂಕ್‌ಫರ್ಟ್‌ (ಜರ್ಮನಿ): ಇತ್ತೀಚೆಗೆ ಮ್ಯೂನಿಕ್‌ನ ಐನ್‌ಸ್ಟೈನ್ ಕಲ್ಚರ್ ವೇದಿಕೆ ನಾಟ್ಯಫೆಸ್ಟ್ 2026...

ಕರ್ನಾಟಕ ಸಂಘ ಖತರ್‌ನಿಂದ ಯಶಸ್ವಿಯಾಗಿ ನಡೆದ ರಕ್ತದಾನ ಶಿಬಿರ

ದೋಹಾ(ಖತರ್‌): ಭಾರತೀಯ ಸಾಂಸ್ಕೃತಿಕ ಕೇಂದ್ರ (ICC) ಹಾಗೂ ಭಾರತೀಯ ರಾಯಭಾರ ಕಚೇರಿ...

ಜರ್ಮನಿಯಲ್ಲಿ ಅದ್ಧೂರಿಯಾಗಿ ನೆರವೇರಿದ ಜಾನಪದ ವೈಭವ; ಸಂಸ್ಕೃತಿಯ ಗತ ವೈಭವ ಸೃಷ್ಟಿ

ಜರ್ಮನಿ: ರೈನ್ ಮೈನ್ ಕನ್ನಡ ಸಂಘದಿಂದ ಇದೇ ಮೊದಲ ಬಾರಿಗೆ ಶನಿವಾರ...

ಕನ್ನಡ ಸಂಘ ಬಹರೈನ್‌ನಿಂದ ಆರೋಗ್ಯ ದಿನ; ಉಚಿತ ವೈದ್ಯಕೀಯ ಶಿಬಿರ

ಬಹರೈನ್: ಕನ್ನಡ ಸಂಘ ಬಹರೈನ್ ವತಿಯಿಂದ ಅಲ್ ಹಿಲಾಲ್ ಹೆಲ್ತ್ ಕೇರ್...

ಕರ್ನಾಟಕ ಸಂಘ ಖತರ್‌ಗೆ ನೂತನ ಆಡಳಿತ ಸಮಿತಿ ಆಯ್ಕೆ; 2026–2028 ಅವಧಿಗೆ 15ನೇ ಅಧ್ಯಕ್ಷರಾಗಿ ಸುಬ್ರಮಣ್ಯ ಹೆಬ್ಬಾಗಿಲು ಅವಿರೋಧ ಆಯ್ಕೆ

ದೋಹಾ: ಭಾರತೀಯ ಸಾಂಸ್ಕೃತಿಕ ಕೇಂದ್ರ (ICC) ಆಶ್ರಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಮುಖ ಭಾರತೀಯ...

Related Articles

Popular Categories