ಖತರ್ಕರ್ನಾಟಕ ಸಂಘ ಖತರ್‌ನಿಂದ ಯಶಸ್ವಿಯಾಗಿ ನಡೆದ ರಕ್ತದಾನ ಶಿಬಿರ

ಕರ್ನಾಟಕ ಸಂಘ ಖತರ್‌ನಿಂದ ಯಶಸ್ವಿಯಾಗಿ ನಡೆದ ರಕ್ತದಾನ ಶಿಬಿರ

ದೋಹಾ(ಖತರ್‌): ಭಾರತೀಯ ಸಾಂಸ್ಕೃತಿಕ ಕೇಂದ್ರ (ICC) ಹಾಗೂ ಭಾರತೀಯ ರಾಯಭಾರ ಕಚೇರಿ ದೋಹಾ ಆಶ್ರಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಸಂಘ ಖತರ್‌ (KSQ), ಹಮದ್ ಮೆಡಿಕಲ್ ಕಾರ್ಪೊರೇಷನ್ ಸಹಯೋಗದಲ್ಲಿ ಖತರ್‌ ರಾಷ್ಟ್ರೀಯ ರಕ್ತದಾನ ಕೇಂದ್ರದಲ್ಲಿ “Everyone Could Be a Hero” ಎಂಬ ಧ್ಯೇಯ ವಾಕ್ಯದೊಂದಿಗೆ ರಕ್ತದಾನ ಶಿಬಿರವನ್ನು ಇತ್ತೀಚೆಗೆ ಯಶಸ್ವಿಯಾಗಿ ಆಯೋಜಿಸಿತು.

ಈ ಕಾರ್ಯಕ್ರಮಕ್ಕೆ ಭಾರತೀಯ ರಾಯಭಾರ ಕಚೇರಿ, ದೋಹಾದ ಪ್ರಥಮ ಕಾರ್ಯದರ್ಶಿ ಈಶ್ ಸಿಂಘಾಲ್ ಹಾಗೂ ಹಮದ್ ಮೆಡಿಕಲ್ ಕಾರ್ಪೊರೇಷನ್‌ನ ವೈದ್ಯಕೀಯ ವ್ಯವಸ್ಥಾಪಕಿ ಮತ್ತು ಡೋನರ್ ರಿಕ್ರೂಟ್‌ಮೆಂಟ್ ಮುಖ್ಯಸ್ಥೆ ಸಾದಿಕಾ ಅಲ್ ಮಹ್ಮೂದಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಕಾರ್ಯಕ್ರಮವು ಕರ್ನಾಟಕ ಸಂಘ ಖತರ್‌ನ ಪ್ರಧಾನ ಕಾರ್ಯದರ್ಶಿ ಸುಜಿತ್ ಕುಮಾರ್ ಅವರ ಸ್ವಾಗತ ಭಾಷಣದೊಂದಿಗೆ ಆರಂಭವಾಯಿತು.

ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಮುಖ್ಯ ಅತಿಥಿ ಈಶ್ ಸಿಂಘಾಲ್ ಅವರು, ರಕ್ತದಾನವು ಜೀವ ಉಳಿಸುವ ಮಹತ್ತರ ಮಾನವೀಯ ಕಾರ್ಯವಾಗಿದ್ದು, ಸಮುದಾಯದ ಪ್ರತಿಯೊಬ್ಬರೂ ನಿಯಮಿತವಾಗಿ ರಕ್ತದಾನದಲ್ಲಿ ಭಾಗವಹಿಸಬೇಕು ಎಂದು ಕರೆ ನೀಡಿದರು. ಕರ್ನಾಟಕ ಸಂಘ ಖತರ್‌ ಅಧ್ಯಕ್ಷ ಸುಬ್ರಮಣ್ಯ ಹೆಬ್ಬಾಗಿಲು ಅವರು ಸಂಘದ ಸಾಮಾಜಿಕ ಸೇವೆ ಹಾಗೂ ಸಮುದಾಯ ಕಲ್ಯಾಣದ ಬದ್ಧತೆಯನ್ನು ಒತ್ತಿಹೇಳಿದರು.

ಸಾದಿಕಾ ಅಲ್ ಮಹ್ಮೂದಿ ಅವರು ಖತರ್‌ ಆಸ್ಪತ್ರೆಗಳಲ್ಲಿ ರಕ್ತ ಸಂಗ್ರಹದ ಅಗತ್ಯತೆ ಕುರಿತು ಮಾತನಾಡಿ, ಭಾರತೀಯ ಸಮುದಾಯದ ನಿರಂತರ ಬೆಂಬಲವನ್ನು ಪ್ರಶಂಸಿಸಿದರು.

ಕಾರ್ಯಕ್ರಮದಲ್ಲಿ ವೈದ್ಯಕೀಯ ತಜ್ಞ ಡಾ.ಅಮಿತ್ ವರ್ಮಾ ಅವರು ರಕ್ತದಾನದ ಆರೋಗ್ಯಕರ ಪ್ರಯೋಜನಗಳು ಹಾಗೂ ಅದರ ಮಹತ್ವದ ಬಗ್ಗೆ ವಿವರವಾಗಿ ಮಾತನಾಡಿ, ಸಮಾಜದಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ 25 ಕ್ಕೂ ಹೆಚ್ಚು ಬಾರಿ ರಕ್ತದಾನ ಮಾಡಿದ ಹಿರಿಯ ದಾನಿಗಳಾದ ಡಾ. ಸಂಜಯ್ ಕುದರಿ, ಶ್ರೀಧರ್ ನಾಯಕ್ ಹಾಗೂ ಮೊಹಮ್ಮದ್ ಸೊಹೈಲ್ ಅವರನ್ನು ವಿಶೇಷವಾಗಿ ಸನ್ಮಾನಿಸಲಾಯಿತು.

ಶಿಬಿರಕ್ಕೆ ಭಾರತೀಯ ಅನಿವಾಸಿ ಸಮುದಾಯದಿಂದ ಭಾರೀ ಸ್ಪಂದನೆ ದೊರೆತಿದ್ದು, ಸಂಗ್ರಹಿಸಲಾದ ರಕ್ತ ಘಟಕಗಳು ಹಮದ್ ಮೆಡಿಕಲ್ ಕಾರ್ಪೊರೇಷನ್‌ನ ಜೀವ ರಕ್ಷಕ ಸೇವೆಗಳಿಗೆ ನೆರವಾಗಲಿವೆ.

ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿ, ಖ್ಯಾತ ಗಾಯಕ ರಾಜೇಶ್ ಕೃಷ್ಣನ್ ಮತ್ತು ತಂಡದವರ ಸಂಗೀತ ಕಾರ್ಯಕ್ರಮ ಸಂಭ್ರಮ 2026ರ ಪೋಸ್ಟರ್ ಅನ್ನು ಅಧಿಕೃತವಾಗಿ ಅನಾವರಣಗೊಳಿಸಲಾಯಿತು. ಈ ಕಾರ್ಯಕ್ರಮವು ಜೂನ್ 12, 2026 ರಂದು ದೋಹಾದ DPS MIS ಆಡಿಟೋರಿಯಂನಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಶುಭಾ ನಿರೂಪಿಸಿದರು. ಉಪಾಧ್ಯಕ್ಷ ಅನಿಲ್ ಭಾಸಗಿ ಅವರು ವಂದನಾರ್ಪಣೆ ಸಲ್ಲಿಸಿದರು.

Hot this week

ಜರ್ಮನಿಯಲ್ಲಿ ಅದ್ಧೂರಿಯಾಗಿ ನೆರವೇರಿದ ಜಾನಪದ ವೈಭವ; ಸಂಸ್ಕೃತಿಯ ಗತ ವೈಭವ ಸೃಷ್ಟಿ

ಜರ್ಮನಿ: ರೈನ್ ಮೈನ್ ಕನ್ನಡ ಸಂಘದಿಂದ ಇದೇ ಮೊದಲ ಬಾರಿಗೆ ಶನಿವಾರ...

ಕನ್ನಡ ಸಂಘ ಬಹರೈನ್‌ನಿಂದ ಆರೋಗ್ಯ ದಿನ; ಉಚಿತ ವೈದ್ಯಕೀಯ ಶಿಬಿರ

ಬಹರೈನ್: ಕನ್ನಡ ಸಂಘ ಬಹರೈನ್ ವತಿಯಿಂದ ಅಲ್ ಹಿಲಾಲ್ ಹೆಲ್ತ್ ಕೇರ್...

ಕರ್ನಾಟಕ ಸಂಘ ಖತರ್‌ಗೆ ನೂತನ ಆಡಳಿತ ಸಮಿತಿ ಆಯ್ಕೆ; 2026–2028 ಅವಧಿಗೆ 15ನೇ ಅಧ್ಯಕ್ಷರಾಗಿ ಸುಬ್ರಮಣ್ಯ ಹೆಬ್ಬಾಗಿಲು ಅವಿರೋಧ ಆಯ್ಕೆ

ದೋಹಾ: ಭಾರತೀಯ ಸಾಂಸ್ಕೃತಿಕ ಕೇಂದ್ರ (ICC) ಆಶ್ರಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಮುಖ ಭಾರತೀಯ...

ಖತರ್‌ ಕರ್ನಾಟಕ ಸಂಘದಿಂದ ‘ತಾಯಂದಿರ ದಿನ 2026’ ಆಚರಣೆ

ದೋಹಾ(ಖತರ್‌): ಕರ್ನಾಟಕ ಸಂಘ ಖತರ್‌ (KSQ), ಭಾರತೀಯ ಸಾಂಸ್ಕೃತಿಕ ಕೇಂದ್ರ (ICC)...

ಮೇ 15ರಂದು ಬಹರೈನ್ ಕನ್ನಡ ಸಂಘದ ಆಶ್ರಯದಲ್ಲಿ ಉಚಿತ ವೈದ್ಯಕೀಯ ಶಿಬಿರ

ಕನ್ನಡ ಸಂಘ ಬಹರೈನ್ ಆಶ್ರಯದಲ್ಲಿ ಅಲ್ ಹಿಲಾಲ್ ಹೆಲ್ತ್ ಕೇರ್ ಗ್ರೂಪ್...

Related Articles

Popular Categories