ಬಹರೈನ್ಕನ್ನಡ ಸಂಘ ಬಹರೈನ್‌ಗೆ ಪ್ರತಿಷ್ಠಿತ “ನವ ಕರ್ನಾಟಕ ರತ್ನ”...

ಕನ್ನಡ ಸಂಘ ಬಹರೈನ್‌ಗೆ ಪ್ರತಿಷ್ಠಿತ “ನವ ಕರ್ನಾಟಕ ರತ್ನ” ಪ್ರಶಸ್ತಿ

ಬೆಂಗಳೂರು: ಕನ್ನಡ ಭಾಷೆ, ನಾಡು-ನುಡಿ, ಕಲೆ, ಸಂಸ್ಕೃತಿ ಹಾಗೂ ಹೊರನಾಡಿನಲ್ಲಿ ಕನ್ನಡಿಗರ ಸೇವೆಗಾಗಿ ಸಲ್ಲಿಸುತ್ತಿರುವ ಮಹತ್ವದ ಕೊಡುಗೆಯನ್ನು ಗುರುತಿಸಿ ಕನ್ನಡ ಸಂಘ ಬಹರೈನ್‌ಗೆ ಪ್ರತಿಷ್ಠಿತ “ನವ ಕರ್ನಾಟಕ ರತ್ನ” ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ತೃತೀಯ ಅನಿವಾಸಿ ಕನ್ನಡಿಗರ ಸಮ್ಮೇಳನ ಹಾಗೂ ಹೊರನಾಡು ಕನ್ನಡಿಗರ ಸಮ್ಮೇಳನದ ಅಂಗವಾಗಿ ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಈ ಪ್ರತಿಷ್ಠಿತ ಗೌರವವನ್ನು ಪ್ರದಾನ ಮಾಡಲಾಯಿತು.

ವೇದಿಕೆಯಲ್ಲಿ ಡಾ. ಆರತಿ ಕೃಷ್ಣ, ನಿಕಟಪೂರ್ವ ಉಪಾಧ್ಯಕ್ಷರು, ಕರ್ನಾಟಕ ಅನಿವಾಸಿ ಭಾರತೀಯ ಕೋಶ, ಮಂಜುನಾಥ ಸಾಗರ್, ಸರ್ವೋತ್ತಮ ಶೆಟ್ಟಿ ಅಬುಧಾಬಿ ಸೇರಿದಂತೆ ಗಣ್ಯರ ಸಮ್ಮುಖದಲ್ಲಿ ಕನ್ನಡ ಸಂಘ ಬಹರೈನ್ ಅಧ್ಯಕ್ಷರಾದ ಅಜಿತ್ ಬಂಗೇರ ಅವರು ಸಂಘದ ಪರವಾಗಿ ಪ್ರಶಸ್ತಿಯನ್ನು ಸ್ವೀಕರಿಸಿದರು.
ಬಹರೈನ್‌ನಲ್ಲಿ ಕನ್ನಡ ಭಾಷೆ, ಕಲೆ, ಸಂಸ್ಕೃತಿ ಹಾಗೂ ಕನ್ನಡಿಗರ ಒಗ್ಗಟ್ಟಿಗಾಗಿ ಕನ್ನಡ ಸಂಘ ಬಹರೈನ್ ಕಳೆದ 48 ವರ್ಷಗಳಿಂದ ನಡೆಸಿಕೊಂಡು ಬರುತ್ತಿರುವ ನಿರಂತರ ಚಟುವಟಿಕೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಸಮಾಜಮುಖಿ ಸೇವಾ ಕಾರ್ಯಗಳನ್ನು ಗುರುತಿಸಿ ಈ ಗೌರವ ನೀಡಲಾಗಿದೆ.

ಈ ಪ್ರತಿಷ್ಠಿತ ಪ್ರಶಸ್ತಿ ಕನ್ನಡ ಸಂಘ ಬಹರೈನ್‌ನ ಎಲ್ಲಾ ಸದಸ್ಯರು, ಪದಾಧಿಕಾರಿಗಳು, ಕಲಾವಿದರು, ಸ್ವಯಂಸೇವಕರು ಹಾಗೂ ಹಿತೈಷಿಗಳಿಗೆ ಹೆಮ್ಮೆಯ ಕ್ಷಣವಾಗಿದೆ. ಸಂಘದ ನಿರಂತರ ಸೇವೆಗೆ ದೊರೆತ ಈ ಗೌರವವು ಮುಂದಿನ ದಿನಗಳಲ್ಲಿ ಕನ್ನಡ ನಾಡು-ನುಡಿ, ಕಲೆ ಮತ್ತು ಸಂಸ್ಕೃತಿಯ ಸೇವೆಯನ್ನು ಮತ್ತಷ್ಟು ಉತ್ಸಾಹದಿಂದ ಮುಂದುವರಿಸಲು ಪ್ರೇರಣೆಯಾಗಿದೆ.

Hot this week

ದುಬೈಯಲ್ಲಿ ದಾಸವಾಣಿಯ ಸೊಬಗನ್ನು ಸಾರಿದ 27ನೇ ಹರಿನಾಮ ಸಂಕೀರ್ತನೆ

ದುಬೈ: ಕಳೆದ ನಾಲ್ಕು ದಶಕಗಳಿಂದ ದುಬೈಯಲ್ಲಿ ನೆಲೆಸಿದ್ದು, ಆಸಕ್ತರಿಗೆ ಕರ್ನಾಟಕ ಶಾಸ್ತ್ರೀಯ...

ಬಹರೈನ್‌; ಅ.9ರಂದು ಶ್ರೀ ನಾರಾಯಣ ಗುರು ಜಯಂತಿ ಅಂಗವಾಗಿ ‘Tribute to Bahrain’ ವಿಶೇಷ ಕಾರ್ಯಕ್ರಮ

ಮನಾಮಾ: ಬದುಕನ್ನು ಕಟ್ಟಿಕೊಳ್ಳಲು, ಕನಸುಗಳನ್ನು ನನಸಾಗಿಸಿಕೊಳ್ಳಲು ಹಾಗೂ ಭವಿಷ್ಯಕ್ಕೆ ಹೊಸ ದಿಕ್ಕು...

‘ಕನ್ನಡ ಸಂಘ ಬಹರೈನ್’ನಿಂದ ‘ಯಕ್ಷ ವೈಭವ 2026’: ಅದ್ಧೂರಿ ಯಕ್ಷಗಾನ ಪ್ರದರ್ಶನ

ಬಹರೈನ್: ಕನ್ನಡ ಸಂಘ ಬಹರೈನ್ ವತಿಯಿಂದ ಆಯೋಜಿಸಲಾದ “ಯಕ್ಷ ವೈಭವ 2026...

ಕರ್ನಾಟಕ ಸಂಘ ಖತರ್‌ನಿಂದ 71ನೇ ಕರ್ನಾಟಕ ರಾಜ್ಯೋತ್ಸವ ‘ಕರುನಾಡ ವೈಭವ 2026’ ಪೋಸ್ಟರ್ ಅನಾವರಣ

ದೋಹಾ: ಭಾರತೀಯ ರಾಯಭಾರ ಕಚೇರಿ, ದೋಹಾ ಇದರ ಆಶ್ರಯದಲ್ಲಿ ಕಾರ್ಯನಿರ್ವಹಿಸುವ ಭಾರತೀಯ...

ಮಸ್ಕತ್‌ನಲ್ಲಿ ಸತ್ಯನಾರಾಯಣ ಪೂಜೆ-ನಾರಾಯಣ ಗುರು ಜಯಂತಿ ಆಚರಣೆ

ಮಸ್ಕತ್: ಒಮಾನ್ ಬಿಲ್ಲವಾಸ್ ವತಿಯಿಂದ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಬ್ರಹ್ಮಶ್ರೀ...

Related Articles

Popular Categories