Lead Newsಕೆಎಸ್‌ಕ್ಯೂ ಅಧ್ಯಕ್ಷ ಸುಬ್ರಹ್ಮಣ್ಯ ಹೆಬ್ಬಾಗಿಲುಗೆ ಐಸಿಸಿ ಖತರ್‌ ಗೌರವ-ಸನ್ಮಾನ

ಕೆಎಸ್‌ಕ್ಯೂ ಅಧ್ಯಕ್ಷ ಸುಬ್ರಹ್ಮಣ್ಯ ಹೆಬ್ಬಾಗಿಲುಗೆ ಐಸಿಸಿ ಖತರ್‌ ಗೌರವ-ಸನ್ಮಾನ

ದೋಹಾ: ಖತರ್‌ನಲ್ಲಿರುವ ಭಾರತೀಯ ಸಮುದಾಯಕ್ಕೆ ನೀಡಿದ ಅಪಾರ ಕೊಡುಗೆ ಹಾಗೂ ಕ್ರಿಯಾಶೀಲ ನಾಯಕತ್ವವನ್ನು ಗುರುತಿಸಿ, ಖತರ್‌ನ ಭಾರತೀಯ ಸಾಂಸ್ಕೃತಿಕ ಕೇಂದ್ರವು (ಐಸಿಸಿ) ‘ಕರ್ನಾಟಕ ಸಂಘ ಖತರ್‌’ (ಕೆಎಸ್‌ಕ್ಯೂ) ಅಧ್ಯಕ್ಷ ಸುಬ್ರಹ್ಮಣ್ಯ ಹೆಬ್ಬಾಗಿಲು ಅವರಿಗೆ ಅದ್ಧೂರಿಯಾಗಿ ಸನ್ಮಾನಿಸಿ ಗೌರವಿಸಿತು.

ಭಾರತೀಯ ರಾಯಭಾರ ಕಚೇರಿಯ ಆಶ್ರಯದಲ್ಲಿರುವ ಐಸಿಸಿಯ ‘ಅಶೋಕ ಹಾಲ್’ನಲ್ಲಿ ಆಯೋಜಿಸಲಾಗಿದ್ದ 101ನೇ ಆವೃತ್ತಿಯ ‘ವೆಡ್ನೆಸ್‌ಡೇ ಫಿಯೆಸ್ಟಾ – ಸಿಲ್ವರ್ ರೈಸ್’ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಈ ಸನ್ಮಾನ ನೀಡಲಾಯಿತು. ಕೆಎಸ್‌ಕ್ಯೂ ಸಂಸ್ಥೆಯು ಭಾರತೀಯ ರಾಯಭಾರ ಕಚೇರಿಯ ಮಾನ್ಯತೆ ಪಡೆದ ಪ್ರಮುಖ ಸಂಘಟನೆಯಾಗಿದೆ.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಖತರ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಕೌನ್ಸಿಲರ್ (ಹೆಡ್ ಆಫ್ ಚಾನ್ಸರಿ ಮತ್ತು ಕಾನ್ಸುಲರ್) ಡಾ. ವೈಭವ್ ಎ. ತಾಂಡಲೆ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷೀಯ ಭಾಷಣವನ್ನು ಮಾಡಿದ ಐಸಿಸಿ ಅಧ್ಯಕ್ಷ ಎ.ಪಿ. ಮಣಿಕಂಠನ್ ಅವರು, ಸಮುದಾಯದ ಮುಖಂಡರ ಸೇವೆಯನ್ನು ಶ್ಲಾಘಿಸುತ್ತಾ ಸುಬ್ರಹ್ಮಣ್ಯ ಹೆಬ್ಬಾಗಿಲು ಅವರ ಸಮಾಜಸೇವೆ ಮತ್ತು ಸಂಘಟನಾ ಕಾರ್ಯಗಳನ್ನು ಕೊಂಡಾಡಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಸುಬ್ರಹ್ಮಣ್ಯ ಹೆಬ್ಬಾಗಿಲು, ಭಾರತೀಯ ರಾಯಭಾರ ಕಚೇರಿ, ಐಸಿಸಿ ಆಡಳಿತ ಮಂಡಳಿ ಹಾಗೂ ಕೆಎಸ್‌ಕ್ಯೂ ಕಾರ್ಯಕಾರಿ ಸಮಿತಿಗೆ ತಮ್ಮ ಕೃತಜ್ಞತೆಯನ್ನು ಸಲ್ಲಿಸಿದರು.

ಐಸಿಸಿ ಹಣಕಾಸು ಮುಖ್ಯಸ್ಥ ಬಿಸ್ವಜಿತ್ ಬ್ಯಾನರ್ಜಿ ಅವರ ಸ್ವಾಗತದೊಂದಿಗೆ ಆರಂಭವಾದ ಈ ವರ್ಣರಂಜಿತ ಸಂಜೆಯು ಸಂತೋಷ್ ಕುಲಕರ್ಣಿ ಅವರ ವಂದನಾರ್ಪಣೆಯೊಂದಿಗೆ ಮುಕ್ತಾಯಗೊಂಡಿತು.

ಕಾರ್ಯಕ್ರಮದಲ್ಲಿ ಐಸಿಸಿ ಸಲಹಾ ಮಂಡಳಿ ಅಧ್ಯಕ್ಷ ಪಿ.ಎನ್. ಬಾಬು ರಾಜನ್, ಉಪಾಧ್ಯಕ್ಷ ಶಾಂತನು ದೇಶಪಾಂಡೆ, ಪ್ರಧಾನ ಕಾರ್ಯದರ್ಶಿ ಅಬ್ರಹಾಂ ಕೆ. ಜೋಸೆಫ್, ವಿವಿಧ ಸಂಘಟನೆಗಳ ಅಧ್ಯಕ್ಷರು ಹಾಗೂ ಭಾರತೀಯ ಸಮುದಾಯದ ಪ್ರಮುಖರು ಉಪಸ್ಥಿತರಿದ್ದರು.

Hot this week

ದುಬೈನಲ್ಲಿ ಎಸ್‌ಕೆಎಸ್‌ಎಸ್‌ಎಫ್ ವಿಖಾಯ ವತಿಯಿಂದ ರಕ್ತದಾನ ಶಿಬಿರ; 194 ಮಂದಿಯಿಂದ ರಕ್ತದಾನ

ದುಬೈ: ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಶೈಖುನಾ ತ್ವಾಖಾ ಅಹ್ಮದ್ ಮುಸ್ಲಿಯಾರ್...

ಸೋಲೋ ವಿಶ್ವ ಮೋಟಾರ್‌ಸೈಕಲ್ ಯಾತ್ರಿಕ ಗೇಬ್ರಿಯಲ್ ಶರತ್​​ರನ್ನು ಗೌರವಿಸಿದ ಕರ್ನಾಟಕ ಸಂಘ ಖತರ್

ದೋಹಾ: ಭಾರತೀಯ ಸಮುದಾಯಕ್ಕೆ ಹೆಮ್ಮೆಯ ಕ್ಷಣವಾಗುವಂತೆ, ಮಂಗಳೂರಿನ ಸಾಹಸಿ ಸೋಲೋ ವಿಶ್ವ...

ಕನ್ನಡ ಸಂಘ ಬಹರೈನ್‌ಗೆ ಪ್ರತಿಷ್ಠಿತ “ನವ ಕರ್ನಾಟಕ ರತ್ನ” ಪ್ರಶಸ್ತಿ

ಬೆಂಗಳೂರು: ಕನ್ನಡ ಭಾಷೆ, ನಾಡು-ನುಡಿ, ಕಲೆ, ಸಂಸ್ಕೃತಿ ಹಾಗೂ ಹೊರನಾಡಿನಲ್ಲಿ ಕನ್ನಡಿಗರ...

ದುಬೈಯಲ್ಲಿ ದಾಸವಾಣಿಯ ಸೊಬಗನ್ನು ಸಾರಿದ 27ನೇ ಹರಿನಾಮ ಸಂಕೀರ್ತನೆ

ದುಬೈ: ಕಳೆದ ನಾಲ್ಕು ದಶಕಗಳಿಂದ ದುಬೈಯಲ್ಲಿ ನೆಲೆಸಿದ್ದು, ಆಸಕ್ತರಿಗೆ ಕರ್ನಾಟಕ ಶಾಸ್ತ್ರೀಯ...

Related Articles

Popular Categories