ಯುಎಸ್‌ಎಅಮೆರಿಕ | ಶಾಲೆಯಲ್ಲಿ ವಿದ್ಯಾರ್ಥಿನಿಯಿಂದ ಗುಂಡಿನ ದಾಳಿ: ಇಬ್ಬರು...

ಅಮೆರಿಕ | ಶಾಲೆಯಲ್ಲಿ ವಿದ್ಯಾರ್ಥಿನಿಯಿಂದ ಗುಂಡಿನ ದಾಳಿ: ಇಬ್ಬರು ಮೃತ್ಯು

ವಾಷಿಂಗ್ಟನ್: ಅಮೆರಿಕದ ವಿಸ್ಕಾನ್ಸಿನ್‌ ರಾಜ್ಯದ ಖಾಸಗಿ ಶಾಲೆಯೊಂದರಲ್ಲಿ ವಿದ್ಯಾರ್ಥಿನಿಯೊಬ್ಬಳು ‌ಗುಂಡಿನ ದಾಳಿ ನಡೆಸಿ ಇಬ್ಬರನ್ನು ಕೊಂದ ಘಟನೆ ನಡೆದಿದೆ. ಇದೇವೇಳೆ ಶಂಕಿತ ಶೂಟರ್ ಸ್ವಯಂ ಗುಂಡಿಕ್ಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ.

ಶೂಟೌಟ್ ನಲ್ಲಿ ಓರ್ವ ವಿದ್ಯಾರ್ಥಿ, ಒಬ್ಬರು ಶಿಕ್ಷಕಿ ಕೊಲೆಯಾಗಿದ್ದಾರೆ. ಶಂಕಿತ ಶೂಟರ್‌ ಶಾಲೆಯ 15 ವರ್ಷದ ವಿದ್ಯಾರ್ಥಿನಿ ಎಂದು ಪೊಲೀಸರು ತಿಳಿಸಿದ್ದಾರೆ.

ಸುಮಾರು 400 ವಿದ್ಯಾರ್ಥಿಗಳಿರುವ ಅಬಂಡಂಟ್ ಲೈಫ್ ಕ್ರಿಶ್ಚಿಯನ್ ಸ್ಕೂಲ್ ಎಂಬ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಈ ಗುಂಡಿನ ದಾಳಿ ನಡೆದಿದೆ. ಘಟನೆಯಲ್ಲಿ ಗಾಯಗೊಂಡಿದ್ದ ಆರು ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಾಯಾಳುಗಳ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

Hot this week

ಭಾರತದ ನೂತನ ಕಾನ್ಸುಲ್ ಜನರಲ್ ಡಾ.ವಿಷ್ಣುವರ್ಧನ ರೆಡ್ಡಿಗೆ ಕನ್ನಡಿಗರ ಕೂಟ ದುಬೈಯಿಂದ ಸ್ವಾಗತ

ದುಬೈ: ಯುಎಇಯ ಪ್ರತಿಷ್ಠಿತ ಕನ್ನಡ ಸಂಘಟನೆಗಳಲ್ಲಿ ಒಂದಾಗಿರುವ ಕನ್ನಡಿಗರ ಕೂಟ, ದುಬೈ...

ಭಾರತದ 80ನೇ ಸ್ವಾತಂತ್ರೋತ್ಸವದ ಸವಿನೆನಪಿಗಾಗಿ ರಕ್ತದಾನದಿಂದ ಮಾನವೀಯತೆಯ ಸಂದೇಶ ಸಾರಿದ ಕರ್ನಾಟಕ ಸಂಘ ಶಾರ್ಜಾ

ದುಬೈ: ಭಾರತದ 80ನೇ ಸ್ವಾತಂತ್ರೋತ್ಸವದ ಸವಿನೆನಪಿಗಾಗಿ ಕರ್ನಾಟಕ ಸಂಘ ಶಾರ್ಜಾ ಮತ್ತು...

ಸಲಾಲದ ಅಲ್ ನೂರ್ ಎಜುಕೇಶನ್ ಸೆಂಟರ್‌ನಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಸಲಾಲ(ಒಮಾನ್): ಸಲಾಲದ ಅಲ್ ನೂರ್ ಎಜುಕೇಶನ್ ಸೆಂಟರ್ ನಲ್ಲಿ ಬ್ಯಾರೀಸ್ ಕಮ್ಯುನಿಟಿ...

ಭಾರತದ 80ನೇ ಸ್ವಾತಂತ್ರ್ಯೋತ್ಸವದಲ್ಲಿ ಕರ್ನಾಟಕ ಸಂಘ ಖತರ್‌ನ ಅದ್ದೂರಿ ಭಾಗವಹಿಸುವಿಕೆ

ದೋಹಾ(ಖತರ್): ಭಾರತದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಭಾರತೀಯ ರಾಯಭಾರ ಕಚೇರಿ ದೋಹಾ...

ಬಹರೈನ್; ಆಗಸ್ಟ್ 21ರಂದು ‘ಕೆಸಿಎಫ್’ನಿಂದ ಗ್ರ್ಯಾಂಡ್ ಮೀಲಾದ್ ಕಾನ್ಫರೆನ್ಸ್

ಮನಾಮ: ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ಬಹರೈನ್ ರಾಷ್ಟ್ರೀಯ ಸಮಿತಿಯ ವತಿಯಿಂದ...

Related Articles

Popular Categories