ಯುಎಇಬ್ಯಾರಿ ಸಮುದಾಯ ತನ್ನ ಸಂಸ್ಕೃತಿಯನ್ನು ಮರೆಯಬಾರದು: ಅಲ್ ಮುಝೈನ್...

ಬ್ಯಾರಿ ಸಮುದಾಯ ತನ್ನ ಸಂಸ್ಕೃತಿಯನ್ನು ಮರೆಯಬಾರದು: ಅಲ್ ಮುಝೈನ್ ನ ಸಿಇಓ ಝಕರಿಯ ಜೋಕಟ್ಟೆ

ದುಬೈಯ 'ಬ್ಯಾರಿ ಮೇಳ-2025'ಕ್ಕೆ ಅದ್ದೂರಿ ಚಾಲನೆ  

ದುಬೈ:  ಬ್ಯಾರಿಗಳು ಶಾಂತಿ ಪ್ರಿಯರು, ಸೌಹಾರ್ದ ಪ್ರೇಮಿಗಳು. ಎಲ್ಲರೊಂದಿಗೆ ಬೆರೆತುಕೊಂಡು ಹೋಗುವವರು. ಬ್ಯಾರಿ ಸಮುದಾಯ ತನ್ನ ಸಂಸ್ಕೃತಿಯನ್ನು ಮರೆಯಬಾರದು. ಈ ನಿಟ್ಟಿನಲ್ಲಿ ನಾವು ನಮ್ಮ ಸಮುದಾಯಕ್ಕೆ ಬೇಕಾದ ಕಾರ್ಯಚಟುವಟಿಕೆಯನ್ನು ಮುಂದುವರಿಸಿಕೊಂಡು ಹೋಗಬೇಕು ಎಂದು ಸೌದಿ ಅರೇಬಿಯಾದ ಅಲ್ ಮುಝೈನ್ ನ ಸಿಇಓ ಝಕರಿಯ ಜೋಕಟ್ಟೆ ಅಭಿಪ್ರಾಯಪಟ್ಟರು.  

ಇಲ್ಲಿನ ಇತಿಸಲಾತ್ ಅಕಾಡೆಮಿ ಮೈದಾನದಲ್ಲಿ ರವಿವಾರ ಆಯೋಜಿಸಲಾಗಿರುವ ‘ಬ್ಯಾರಿ ಮೇಳ-2025’ರ ಉದ್ಘಾಟನಾ ಸಮಾರಂಭದಲ್ಲಿ ಅವರು ಮುಖ್ಯ ಅತಿಥಿಯಾಗಿ ಮಾತನಾಡಿದರು. ಮುಂದಿನ ವರ್ಷ 2026ರ ಈದ್ ಹಬ್ಬದ ಬಳಿಕ  ಸೌದಿ ಅರೇಬಿಯಾದಲ್ಲಿ ಬ್ಯಾರಿ ಮೇಳವನ್ನು ಆಯೋಜಿಸುವುದಾಗಿ ಝಕರಿಯ ಜೋಕಟ್ಟೆ ಘೋಷಿಸಿದರು.

ಯುಎಇಯ ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ & ಇಂಡಸ್ಟ್ರಿಸ್(ಬಿಸಿಸಿಐ) ಆಶ್ರಯದಲ್ಲಿ ನಡೆಯುತ್ತಿರುವ ಈ ಮೇಳವನ್ನು ಮಂಗಳೂರು ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ & ಇಂಡಸ್ಟ್ರಿಸ್(ಬಿಸಿಸಿಐ) ಅಧ್ಯಕ್ಷ ಎಸ್.ಎಂ. ರಶೀದ್ ಹಾಜಿ ಉದ್ಘಾಟಿಸಿ ಶುಭ ಹಾರೈಸಿದರು.

ಯುಎಇಯ ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ & ಇಂಡಸ್ಟ್ರಿಸ್(ಬಿಸಿಸಿಐ) ಯುಎಇ ಘಟಕದ ಅಧ್ಯಕ್ಷ ಹಿದಾಯತ್‌ ಅಡ್ಡೂರು ಅಧ್ಯಕ್ಷೀಯ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಬ್ಯಾರಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ಉಮರ್ ಯು.ಎಚ್., ಗೋಳ್ತಮಜಲು ರಝಕ್ ಹಾಜಿ, ಬದ್ರುದ್ದೀನ್, ಇಮ್ತಿಯಾಜ್, ರೊನಾಲ್ಡ್ ಮಾರ್ಟಿಸ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಮುಹಮ್ಮದ್ ಅಝ್ಫಾನ್ ಸೊಂಪಾಡಿ ಕಿರಾತ್ ಪಠಿಸಿದರು. ‘ಬ್ಯಾರಿ ಮೇಳ ಸಂಚಾಲಕ, ಬಿಸಿಸಿಐ ಕಾರ್ಯಕಾರಿಣಿ ಸಮಿತಿ ಸದಸ್ಯ ಅಶ್ರಫ್ ಷಾ ಮಂತೂರ್ ಸ್ವಾಗತಿಸಿದರು. ಅಝರ್ ಹಂಡೇಲ್ ಕಾರ್ಯಕ್ರಮ ನಿರೂಪಿಸಿದರು. ಬಿಸಿಸಿಐ ಕೋಶಾಧಿಕಾರಿ ಹಂಝ ವಂದಿಸಿದರು.

Hot this week

ಕನ್ನಡ ಕಲಿಕೆಯ ಜೊತೆ ಖತರ್‌ನ ಸ್ಥಳೀಯ ಸಮುದಾಯದಲ್ಲಿ ಭಾರತೀಯ ಸಂಸ್ಕೃತಿ ಪ್ರಚಾರಕ್ಕೆ ಆದ್ಯತೆ ನೀಡಿ: ಭಾರತೀಯ ರಾಯಭಾರಿ ವಿಪುಲ್ ಮನವಿ

ದೋಹಾ: ಖತರ್‌ನ ಭಾರತೀಯ ಸಾಂಸ್ಕೃತಿಕ ಕೇಂದ್ರದ (ಐಸಿಸಿ) ಅಂಗಸಂಸ್ಥೆಯಾದ ‘ಕರ್ನಾಟಕ ಸಂಘ...

ಬಹರೈನ್‌; ‘ಕೆಸಿಎಫ್’ನಿಂದ ಈದ್ ಮಿಲಾದ್ ಸಮ್ಮೇಳನಕ್ಕೆ ಸ್ವಾಗತ ಸಮಿತಿ ರಚನೆ

ಮನಾಮ: ಕರ್ನಾಟಕ ಕಲ್ಬರಲ್ ಫೌಂಡೇಶನ್ (ಕೆಸಿಎಫ್) ಬಹರೈನ್‌ ವತಿಯಿಂದ ಪ್ರವಾದಿ ಮುಹಮ್ಮದ್‌ರವರ...

ಅಮೇರಿಕ; ಭಕ್ತಿ, ಬಸವತತ್ವ, ನಾಟಕ-ನೃತ್ಯ ವೈಭವದಿಂದ ಕಂಗೊಳಿಸಿದ VSNA ಮಹಾಸಮ್ಮೇಳನದ ಎರಡನೇ ದಿನ

ವರದಿ: ಬೆಂಕಿ ಬಸಣ್ಣ, ನ್ಯೂಯಾರ್ಕ್ ಸ್ಯಾನ್‌ಫೋರ್ಡ್ (ಉತ್ತರ ಕೆರೊಲಿನಾ: 48ನೇ ವೀರಶೈವ ಸೊಸೈಟಿ...

ಕನ್ನಡ ಸಂಘ ಬಹರೈನ್‌ನ ‘ಯಕ್ಷ ವೈಭವ 2026’ ಮುಹೂರ್ತ ಪೂಜೆ ಸಂಪನ್ನ

ಬಹರೈನ್‌: ಕನ್ನಡ ಸಂಘ ಬಹರೈನ್ ಅರ್ಪಿಸುವ ‘ಯಕ್ಷ ವೈಭವ 2026’ ರ...

ಅಮೇರಿಕ; ಉತ್ತರ ಕೆರೊಲಿನಾದಲ್ಲಿ 48ನೇ ವಿಎಸ್‌ಎನ್‌ಎ ಮಹಾಸಮ್ಮೇಳನಕ್ಕೆ ಅದ್ದೂರಿ ಚಾಲನೆ

-ಬೆಂಕಿ ಬಸಣ್ಣ, ಉತ್ತರ ಕೆರೊಲಿನಾ ಉತ್ತರ ಅಮೇರಿಕದ ವೀರಶೈವ-ಲಿಂಗಾಯತ ಸಮುದಾಯದ ಅತ್ಯಂತ ಹಿರಿಯ...

Related Articles

Popular Categories