ಯುಕೆಐತಿಹಾಸಿಕ ಕೇಂಬ್ರಿಡ್ಜ್‌ ಯೂನಿಯನ್‌ ಅಧ್ಯಕ್ಷೆಯಾಗಿ ಭಾರತೀಯ ಮೂಲದ ಅನುಷ್ಕಾ...

ಐತಿಹಾಸಿಕ ಕೇಂಬ್ರಿಡ್ಜ್‌ ಯೂನಿಯನ್‌ ಅಧ್ಯಕ್ಷೆಯಾಗಿ ಭಾರತೀಯ ಮೂಲದ ಅನುಷ್ಕಾ ಕಾಳೆ ಆಯ್ಕೆ

ಲಂಡನ್: ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದ ಐತಿಹಾಸಿಕ ಕೇಂಬ್ರಿಡ್ಜ್ ಯೂನಿಯನ್ ಸೊಸೈಟಿಯ ಅಧ್ಯಕ್ಷೆಯಾಗಿ ಬ್ರಿಟಿಷ್ ಭಾರತೀಯ ವಿದ್ಯಾರ್ಥಿನಿ ಅನುಷ್ಕಾ ಕಾಳೆ ಆಯ್ಕೆಯಾಗಿದ್ದಾರೆ. ಕೇಂಬ್ರಿಡ್ಜ್ ಯೂನಿಯನ್ ಸೊಸೈಟಿಯು ವಿಶ್ವದ ಅತ್ಯಂತ ಹಳೆಯ ಚರ್ಚಾ ಸಮಾಜಗಳಲ್ಲಿ (debating soceity) ಒಂದಾಗಿದೆ ಮತ್ತು 1815 ರಿಂದ ವಾಕ್ ಸ್ವಾತಂತ್ರ್ಯವನ್ನು ಬಲವಾಗಿ ಪ್ರತಿಪಾದಿಸುತ್ತಿದೆ.

ಇತ್ತೀಚಿನ ಚುನಾವಣೆಯಲ್ಲಿ, ಅನುಷ್ಕಾ ಕಾಳೆ ಅವರು 126 ಮತಗಳನ್ನು ಗಳಿಸಿ ಮುಂದಿನ ಈಸ್ಟರ್ 2025 ಅವಧಿಗೆ ಅವಿರೋಧವಾಗಿ ಆಯ್ಕೆಯಾದರು. ಕೇಂಬ್ರಿಡ್ಜ್‌ ಯೂನಿಯನ್‌ ನ ಅಧ್ಯಕ್ಷೆಯಾಗಿ ಮುಂದಿನ ದಿನಗಳಲ್ಲಿ ಭಾರತೀಯ ಸೊಸೈಟಿ ಸೇರಿದಂತೆ ಹಲವು ಸಂಬಂಧಗಳನ್ನು ಮರು ಗಟ್ಟಿಗೊಳಿಸುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ವರದಿಗಳು ತಿಳಿಸಿವೆ.

“ಈಸ್ಟರ್ 2025 ರ ಕೇಂಬ್ರಿಡ್ಜ್ ಯೂನಿಯನ್ ಸೊಸೈಟಿಯ ಅಧ್ಯಕ್ಷೆಯಾಗಿ ಚುನಾಯಿತಳಾಗಿರುವುದಕ್ಕೆ ನಾನು ಬಹಳ ಸಂತೋಷಪಡುತ್ತೇನೆ ಮತ್ತು ಹೆಮ್ಮೆಪಡುತ್ತೇನೆ. ನನ್ನನ್ನು ಬೆಂಬಲಿಸಿದ್ದಕ್ಕೆ ಎಲ್ಲರಿಗೂ ಧನ್ಯವಾದಗಳು” ಎಂದು ಅವರು ಹೇಳಿದ್ದಾರೆ. “ನನ್ನ ಅವಧಿಯಲ್ಲಿ ಯೂನಿಯನ್‌ ಅನ್ನು ಇನ್ನಷ್ಟು ವಿಸ್ತಾರಗೊಳಿಸುವ ಹಾಗೂ ಭಾರತೀಯ ಸಮಾಜದೊಂದಿಗಿನ ಬಾಂಧವ್ಯ ಬಲಪಡಿಸುವ ಕೆಲಸಗಳನ್ನು ಮುಖ್ಯವಾಗಿ ನಿರ್ವಹಿಸುತ್ತೇನೆ” ಎಂದು ಅವರು ಹೇಳಿದ್ದಾರೆ.

ಕೇಂಬ್ರಿಡ್ಜ್ ಯೂನಿಯನ್ ಸೊಸೈಟಿಯ ಮಾಜಿ ಅಧ್ಯಕ್ಷರಾಗಿ ಹಲವಾರು ಪ್ರಸಿದ್ಧ ವ್ಯಕ್ತಿಗಳು ಈ ಹಿಂದೆ ಕಾರ್ಯನಿರ್ವಹಿಸಿದ್ದಾರೆ. ಪ್ರಸಿದ್ಧ ಇಂಗ್ಲಿಷ್ ಅರ್ಥಶಾಸ್ತ್ರಜ್ಞ ಮತ್ತು ತತ್ವಜ್ಞಾನಿ ಜಾನ್ ಮೇನಾರ್ಡ್ ಕೇನ್ಸ್, ಕಾದಂಬರಿಕಾರ ರಾಬರ್ಟ್ ಹ್ಯಾರಿಸ್ ಮುಂತಾದವರು ಈ ಸ್ಥಾನವನ್ನು ಅಲಂಕರಿಸಿದ್ದರು.

Hot this week

ಕುವೈತ್‌ನ ನೇರಂಬಳ್ಳಿ ಸುರೇಶ್ ರಾವ್​​ಗೆ ‘ಸಮಾಜ ಸೇವಾ ರತ್ನ ಪ್ರಶಸ್ತಿ–2026’

ಕುವೈತ್: ಸಂಘಟಕ, ಕಲಾವಿದ, ಲೇಖಕ, ಸಮಾಜಸೇವಕ, ಕೋವಿಡ್ ವಾರಿಯರ್ ಆಗಿ ಸೇವೆ...

ದುಬೈನಲ್ಲಿ ಫೆಬ್ರವರಿ 22ರಂದು ‘ಯುಎಇ ಬಂಟ್ಸ್’ನಿಂದ ವಾರ್ಷಿಕ ‘ಸ್ಪೋರ್ಟ್ಸ್ ಡೇ-2026’

ದುಬೈ: ಯುಎಇ ಬಂಟ್ಸ್ ನ ವಾರ್ಷಿಕ "ಸ್ಪೋರ್ಟ್ಸ್ ಡೇ-2026" ಫೆಬ್ರವರಿ 22ರಂದು...

Moolur Jumma Masjid representatives felicitated in Dubai; community backs renovation project

Dubai: Representatives of the historic Moolur Jumma Masjid were...

Related Articles

Popular Categories