ಯುಎಸ್‌ಎಇಸ್ರೇಲ್‌ಗೆ ಮಾರಕ ಶಸ್ತ್ರಾಸ್ತ್ರಗಳ ಪೂರೈಕೆ ನಿಲ್ಲಿಸಲು ಬೈಡನ್‌ಗೆ ಡೆಮಾಕ್ರಟಿಕ್...

ಇಸ್ರೇಲ್‌ಗೆ ಮಾರಕ ಶಸ್ತ್ರಾಸ್ತ್ರಗಳ ಪೂರೈಕೆ ನಿಲ್ಲಿಸಲು ಬೈಡನ್‌ಗೆ ಡೆಮಾಕ್ರಟಿಕ್ ಶಾಸಕರ ಒತ್ತಾಯ

ವಾಷಿಂಗ್ಟನ್, ಡಿಸಿ: ಅಮೆರಿಕವು ಇಸ್ರೇಲ್‌ಗೆ ಆಕ್ರಮಣಕಾರಿ ಶಸ್ತ್ರಾಸ್ತ್ರಳನ್ನು ಪೂರೈಸುವುದನ್ನು ಕೂಡಲೇ ನಿಲ್ಲಿಸಬೇಕೆಂದು ಯುನೈಟೆಡ್ ಸ್ಟೇಟ್ಸ್‌ನ ಡೆಮಾಕ್ರಟಿಕ್ ಪಕ್ಷದ ೨೦ ಶಾಸಕರು ಜೋ ಬೈಡನ್ ಆಡಳಿತವನ್ನು ಒತ್ತಾಯಿಸಿದ್ದಾರೆ.
ಈ ನಿಟ್ಟಿನಲ್ಲಿ ವಿದೇಶಾಂಗ ಕಾರ್ಯದರ್ಶಿ ಆ್ಯಂಟನಿ ಬ್ಲಿಂಕನ್‌ಗೆ ಡೆಮಾಕ್ರಟಿಕ್ ಪಕ್ಷದ ಶಾಸಕರು ಪತ್ರ ಬರೆದಿದ್ದು, ಯುದ್ಧಾಪರಾಧ ಎಸಗುವ ದೇಶಗಳಿಗೆ ಮಿಲಿಟರಿ ಸಹಾಯ ಒದಗಿಸುವುದನ್ನು ನಿರ್ಬಂಧಿಸುವ ಮತ್ತು ಅವರಿಗೆ ಮಾನವೀಯ ನೆರವು ನೀಡುವುದನ್ನು ತಡೆಹಿಡಿಯುವ ತನ್ನದೇ ಕಾನೂನನ್ನು ಎತ್ತಿ ಹಿಡಿಯಲು ಕರೆ ನೀಡಿದೆ.


ಇಸ್ರೇಲ್‌ಗೆ ಮಾರಕ ಶಸ್ತ್ರಾಸ್ತ್ರಗಳ ಪೂರೈಕೆ ಮುಂದುವರಿಸುವುದರಿಂದ ಫೆಲಸ್ತೀನ್ ಜನರು ಹೆಚ್ಚಿನ ಸಂಕಷ್ಟಕ್ಕೆ ಈಡಾಗುತ್ತಾರೆ. ಅಲ್ಲದೇ ತನ್ನ ಕಾನೂನು, ನೀತಿ ಮತ್ತು ಅಂತರ್‌ರಾಷ್ಟ್ರೀಯ ನಿಯಮಗಳನ್ನು ಆಯ್ದ ದೇಶಗಳಿಗಷ್ಟೇ ಸೀಮಿತಗೊಳಿಸುತ್ತದೆ ಎಂದು ಜಗತ್ತಿಗೆ ಸಂದೇಶ ನೀಡಿದಂತಾಗುತ್ತದೆ ಎಂದು ಪತ್ರದಲ್ಲಿ ತಿಳಿಸಿದೆ.


ನಮ್ಮ ನೀತಿಯನ್ನು ಇಸ್ರೇಲ್‌ಗೆ ಅನ್ವಯಿಸುವುದರಲ್ಲಿ ವಿಫಲರಾದರೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಗಾಝಾದ ಮೇಲೆ ಯುದ್ಧ ಮುಂದುರಿಸುತ್ತಾರೆ. ಅಲ್ಲದೇ ಅಂತರ್‌ರಾಷ್ಟ್ರೀಯ ವೇದಿಕೆಗಳಲ್ಲಿ ಇಸ್ರೇಲ್‌ನ್ನು ಪ್ರತ್ಯೇಕಿಸುವುದರಿಂದ ಆ ಪ್ರದೇಶದಲ್ಲಿ ಮತ್ತಷ್ಟು ಅಸ್ಥಿರತೆ ಉಂಟಾಗುತ್ತದೆ ಎಂದು ಪತ್ರದಲ್ಲಿ ವಿವರಿಸಲಾಗಿದೆ.


ಗಾಝಾದಲ್ಲಿ ಪರಿಸ್ಥಿತಿ ಸುಧಾರಿಸಲು ವಾಷಿಂಗ್ಟನ್ ವಿವರಿಸಿದ ಷರತ್ತುಗಳನ್ನು ಪೂರೈಸಲು ಇಸ್ರೇಲ್ ವಿಫಲವಾಗಿದೆ ಎಂದು ಹಲವಾರು ಮಾನವ ಹಕ್ಕುಗಳ ಸಂಘಟನೆಗಳು ಹೇಳಿದ್ದರೂ, ಬಿಡೆನ್ ಆಡಳಿತವು ಗಡುವು ಮುಗಿದ ಬಳಿಕ ಇಸ್ರೇಲ್‌ಗೆ ಶಸ್ತ್ರಾಸ್ತ್ರ ಪೂರೈಕೆ ಮುಂದುವರಿಸುವುದಾಗಿ ತಿಳಿಸಿದೆ.

Hot this week

ಭಾರತದ ನೂತನ ಕಾನ್ಸುಲ್ ಜನರಲ್ ಡಾ.ವಿಷ್ಣುವರ್ಧನ ರೆಡ್ಡಿಗೆ ಕನ್ನಡಿಗರ ಕೂಟ ದುಬೈಯಿಂದ ಸ್ವಾಗತ

ದುಬೈ: ಯುಎಇಯ ಪ್ರತಿಷ್ಠಿತ ಕನ್ನಡ ಸಂಘಟನೆಗಳಲ್ಲಿ ಒಂದಾಗಿರುವ ಕನ್ನಡಿಗರ ಕೂಟ, ದುಬೈ...

ಭಾರತದ 80ನೇ ಸ್ವಾತಂತ್ರೋತ್ಸವದ ಸವಿನೆನಪಿಗಾಗಿ ರಕ್ತದಾನದಿಂದ ಮಾನವೀಯತೆಯ ಸಂದೇಶ ಸಾರಿದ ಕರ್ನಾಟಕ ಸಂಘ ಶಾರ್ಜಾ

ದುಬೈ: ಭಾರತದ 80ನೇ ಸ್ವಾತಂತ್ರೋತ್ಸವದ ಸವಿನೆನಪಿಗಾಗಿ ಕರ್ನಾಟಕ ಸಂಘ ಶಾರ್ಜಾ ಮತ್ತು...

ಸಲಾಲದ ಅಲ್ ನೂರ್ ಎಜುಕೇಶನ್ ಸೆಂಟರ್‌ನಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಸಲಾಲ(ಒಮಾನ್): ಸಲಾಲದ ಅಲ್ ನೂರ್ ಎಜುಕೇಶನ್ ಸೆಂಟರ್ ನಲ್ಲಿ ಬ್ಯಾರೀಸ್ ಕಮ್ಯುನಿಟಿ...

ಭಾರತದ 80ನೇ ಸ್ವಾತಂತ್ರ್ಯೋತ್ಸವದಲ್ಲಿ ಕರ್ನಾಟಕ ಸಂಘ ಖತರ್‌ನ ಅದ್ದೂರಿ ಭಾಗವಹಿಸುವಿಕೆ

ದೋಹಾ(ಖತರ್): ಭಾರತದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಭಾರತೀಯ ರಾಯಭಾರ ಕಚೇರಿ ದೋಹಾ...

ಬಹರೈನ್; ಆಗಸ್ಟ್ 21ರಂದು ‘ಕೆಸಿಎಫ್’ನಿಂದ ಗ್ರ್ಯಾಂಡ್ ಮೀಲಾದ್ ಕಾನ್ಫರೆನ್ಸ್

ಮನಾಮ: ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ಬಹರೈನ್ ರಾಷ್ಟ್ರೀಯ ಸಮಿತಿಯ ವತಿಯಿಂದ...

Related Articles

Popular Categories