ದುಬೈ: ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ “ಗಡಿನಾಡ ಉತ್ಸವ -2025” ಕಾರ್ಯಕ್ರಮವು ನಗರದ ಔದ್ ಮೇಥಾದ ಗ್ಲೆಂಡೇಲ ಅಂತಾರಾಷ್ಟ್ರೀಯ ಶಾಲೆಯ ಸಭಾಂಗಣದಲ್ಲಿ ಅಕ್ಟೋಬರ್ 25 ರಂದು ಸಂಜೆ ನಾಲ್ಕರಿಂದ ರಾತ್ರಿ ಹನ್ನೊಂದರ ವರೆಗೆ ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆಯನ್ನು ಮಂಗಳೂರಿನ ಯುವ ಉದ್ಯಮಿ ಪ್ರಕಾಶ್ ಕುಂಪಲ ಬಿಡುಗಡೆಗೊಳಿಸಿದರು.

ಬಿಸಿಸಿಐ ಅಧ್ಯಕ್ಷರಾದ ಹಿದಾಯತ್ ಅಡ್ಡೂರು, ಉಪಾಧ್ಯಕ್ಷರಾದ ಬಶೀರ್ ಕಿನ್ನಿಂಗಾರ್, ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಗಲ್ಫ್ ದೇಶಗಳ ಮುಖ್ಯ ಸಂಚಾಲಕರಾದ ಅಶ್ರಫ್ ಶಾ ಮಂತೂರ್, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಸದಸ್ಯರಾದ ಮೊಹಮ್ಮದ್ ಅಲಿ ಉಚ್ಚಿಲ್, ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಕೇಂದ್ರ ಘಟಕದ ಕೋಶಾಧಿಕಾರಿ ಝಡ್ ಎ ಕಯ್ಯಾರ್, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಎ ಆರ್ ಸುಬ್ಬಯಕಟ್ಟೆ, ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ದುಬೈ ಘಟಕದ ಅಧ್ಯಕ್ಷರಾದ ಅಮರ್ ದೀಪ ಕಲ್ಲುರಾಯ, ಮಾಧ್ಯಮ ಸಂಯೋಜಕ ವಿಜಯಕುಮಾರ್ ಶೆಟ್ಟಿ ಗಾಣದಮೂಲೆ ಮತ್ತು ಬಿಸಿಸಿಐನ ಪದಾಧಿಕಾರಿಗಳಾದ ಅನ್ವರ್ ಹುಸೈನ್ ಅಡ್ಡೂರು, ಮುಶ್ತಾಕ್ ಕದ್ರಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.


