ದುಬೈ: ಯುಎಇಯ ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ & ಇಂಡಸ್ಟ್ರಿ(ಬಿಸಿಸಿಐ) ಆಶ್ರಯದಲ್ಲಿ ಇತಿಸಲಾತ್ ಅಕಾಡೆಮಿ ಮೈದಾನದಲ್ಲಿ ರವಿವಾರ ನಡೆದ ಬ್ಯಾರಿ ಮೇಳದಲ್ಲಿ ಹಲವು ಗಣ್ಯರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.






ಕರ್ನಾಟಕದ ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್ ಅವರಿಗೆ ‘Beary statesman Leadership’ ಪ್ರಶಸ್ತಿ, ತುಂಬೆ ಗ್ರೂಪ್ ನ ಸಂಸ್ಥಾಪಕ ಅಧ್ಯಕ್ಷ ಡಾ.ತುಂಬೆ ಮೊಯ್ದಿನ್ ಅವರಿಗೆ ‘Global beary of Business Icon’ ಪ್ರಶಸ್ತಿ, ಅನಿವಾಸಿ ಭಾರತೀಯ ಉದ್ಯಮಿ ಡಾ.ರೊನಾಲ್ಡ್ ಕೊಲಾಸೊ ಅವರಿಗೆ ‘Global icon of Philanthropy’ ಪ್ರಶಸ್ತಿ, ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆ ಡಾ. ಆರತಿ ಕೃಷ್ಣ ಅವರಿಗೆ ‘Indian Diaspora Humanitarian’ ಪ್ರಶಸ್ತಿ, ಸೌದಿ ಅರೇಬಿಯಾದ ಎಕ್ಸ್‌ಪರ್ಟೈಸ್ ಕಾಂಟ್ರಾಕ್ಟಿಂಗ್ ಕಂಪನಿ ಲಿಮಿಟೆಡ್‌ನ ಸಿಇಒ ಮುಹಮ್ಮದ್ ಆಸಿಫ್ ಕರ್ನಿರೆ ಅವರಿಗೆ ‘Global beary of Business Youth Icon’ ಪ್ರಶಸ್ತಿ ನೀಡಿ ಗೌರವಿಸಲಾಯಿತು.