ಯುಎಇಯುಎಇ ಯಕ್ಷಗಾನ ಅಭ್ಯಾಸ ಕೇಂದ್ರದಿಂದ ಜೂನ್ 29ರಂದು 'ದುಬೈ...

ಯುಎಇ ಯಕ್ಷಗಾನ ಅಭ್ಯಾಸ ಕೇಂದ್ರದಿಂದ ಜೂನ್ 29ರಂದು ‘ದುಬೈ ಯಕ್ಷೋತ್ಸವ 2025’; ಆಮಂತ್ರಣ ಪತ್ರಿಕೆ, ಟಿಕೆಟ್ ಬಿಡುಗಡೆ

ದುಬೈ: ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇ ಇದರ ದಶಮಾನೋತ್ಸವ ಸಂಭ್ರಮವು ಯಕ್ಷಧ್ರುವ ಪಟ್ಲ ಪೌಂಡೇಶನ್ ಯುಎಇ(ದುಬೈ) ಘಟಕದ ಸಹಯೋಗದೊಂದಿಗೆ ಜೂನ್ 29 ರಂದು ಜರಗಲಿರುವ “ದುಬೈ ಯಕ್ಷೋತ್ಸವ-2025” ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಮತ್ತು ಟಿಕೆಟ್ ಬಿಡುಗಡೆ ಕಾರ್ಯಕ್ರಮವು ರವಿವಾರ ದುಬೈನ ಗಿಸಾಸ್‌ನ ಫಾರ್ಚೂನ್ ಪ್ಲಾಝದ ಬಾಕ್ವೆಂಟ್ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಇದೇ ಮೊದಲ ಬಾರಿಗೆ ಒಂದೇ ವೇದಿಕೆಯಲ್ಲಿ ಯುಎಇಯಲ್ಲಿ ಇರುವ ಎಲ್ಲ ತುಳು, ಕನ್ನಡ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದು, ಒಂದು ಅಭೂತಪೂರ್ವ ಸಾಕ್ಷಿಗೆ ಕಾರಣವಾಯಿತು. ಉಪಸ್ಥಿತರಿದ್ದ ಯುಎಇಯ ಕನ್ನಡ ತುಳು ಸಂಘ ಸಂಸ್ಥೆಗಳ ಹಾಗೂ ಎಲ್ಲಾ ಸಮಾಜದ ಪದಾಧಿಕಾರಿಗಳು ಜೂನ್ 29 ರಂದು ನಡೆಯಲಿರುವ ದಶಮಾನೋತ್ಸವ ಕಾರ್ಯಕ್ರಮಕ್ಕೆ ತಮ್ಮ ತಮ್ಮ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ಸಭಾ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಯಕ್ಷಧ್ರುವ ಪಟ್ಲ ಫೌಂಡೇಶನ್ ಯುಎಇ ಘಟಕದ ಅಧ್ಯಕ್ಷ ಸರ್ವೋತ್ತಮ ಶೆಟ್ಟಿ, ಯುಎಇ ಬಂಟ್ಸ್ ಮತ್ತು ಕರ್ನಾಟಕ ಎನ್‌ಆರ್‌ಐ ವೇದಿಕೆಯ ಅಧ್ಯಕ್ಷ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ, ಬ್ರಾಹ್ಮಣ ಸಮಾಜ ಯುಎಇಯ ಅಧ್ಯಕ್ಷ ಸುಧಾಕರ ರಾವ್ ಪೇಜಾವರ, ಉದ್ಯಮಿ ಕಲಾಪೋಷಕರಾದ ಶಿವಶಂಕರ ನೆಕ್ರಾಜೆ, ಶಾರ್ಜಾ ಕರ್ನಾಟಕ ಸಂಘದ ಅಧ್ಯಕ್ಷ ಸತೀಶ್ ಪೂಜಾರಿ, ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಯುಎಇ ಘಟಕರಾದ ಅಧ್ಯಕ್ಷ ಅಮರ್ ದೀಪ್ ಕಲ್ಲೂರಾಯ, ಕರ್ನಾಟಕ ಜಾನಪದ ಅಕಾಡೆಮಿ ದುಬೈಯ ಅಧ್ಯಕ್ಷ ಸದನ್ ದಾಸ್, ಕರ್ನಾಟಕ ಸಂಘ ದುಬೈಯ ಮನೋಹರ ಹೆಗ್ಡೆ, ನಾಗರಾಜ ರಾವ್ ಉಡುಪಿ, ಕನ್ನಡಿಗರ ಕನ್ನಡ ಕೂಟ ದುಬೈಯ ಅಧ್ಯಕ್ಷ ಅರುಣ್ ಕುಮಾರ್, ಉದ್ಯಮಿ ರಶ್ಮಿಕಾಂತ್ ಶೆಟ್ಟಿ, ಕರ್ನಾಟಕ ಸಂಘ ದುಬೈಯ ಗೌರವ ಸಲಹೆಗಾರ ಜಯಂತ್ ಶೆಟ್ಟಿ, ತೀಯಾ ಸಮಾಜ ಯುಎಇಯ ಅಧ್ಯಕ್ಷೆ ಜೆಸ್ಮೀತಾ ವಿವೇಕ್, ಗಮ್ಮತ್ ಕಲಾವಿದೆರ್ ದುಬೈಯ ನಿರ್ದೆಶಕ ವಿಶ್ವನಾಥ ಶೆಟ್ಟಿ, ಬಿಲ್ಲವಾಸ್ ದುಬೈಯ ಅಧ್ಯಕ್ಷ ದೀಪಕ್ ಎಸ್.ಪಿ, ಹಿರಿಯ ಯಕ್ಷಗಾನ ಕಲಾವಿದರಾದ ಪ್ರಭಾಕರ ಸುವರ್ಣ ಕರ್ನಿರೆ, ರಂಗ ಕಲಾವಿದರಾದ ವಾಸು ಶೆಟ್ಟಿ, ಉದ್ಯಮಿ ರಮಾನಂದ ಶೆಟ್ಟಿ, ಜೈನ್ ಮಿಲನ್ ದುಬೈಯ ಸಂದೇಶ್ ಜೈನ್, ಗಾಣಿಗ ಸಮಾಜ ದುಬೈಯ ಸುಪ್ರೀತ್ ಗಾಣಿಗ, ವೀರಶೈವ ಲಿಂಗಯುತ ಸಮಾಜ ದುಬೈಯ ಮಲ್ಲಿಕಾರ್ಜುನ ಗೌಡ, ಹಿರಿಯ ಹಿಮ್ಮೇಳ ವಾದಕರಾದ ವೆಂಕಟೇಶ ಶಾಸ್ತ್ರಿ, ಒಕ್ಕಲಿಗರ ಸಂಘ ಯುಎಇಯ ಅಧ್ಯಕ್ಷ ಕಿರಣ್ ಗೌಡ, ಚಿತ್ರ ನಿರ್ಮಾಪಕರಾದ ಶೋಧನ್ ಪ್ರಸಾದ್, ಮಾರ್ಗದೀಪ ಸಾಂಸ್ಕೃತಿಕ ಸಮಿತಿಯ ಸುಗಂದರಾಜ್ ಬೇಕಲ್, ಬಿರುವೆರ್ ಕುಡ್ಲ ದುಬೈಯ ಸಂದೀಪ್ ಕೋಟ್ಯಾನ್, ಪೊಲದವರ ಯಾನೆ ಗಟ್ಟಿ ಸಮಾಜ ದುಬೈಯ ಮನೋಜ್ ಬಂಗೆರ, ಯಕ್ಷಗಾನ ಅಭ್ಯಾಸ ಕೇಂದ್ರದ ಸಂಚಾಲಕ ದಿನೇಶ್ ಶೆಟ್ಟಿ ಕೊಟ್ಟಿಂಜ, ಯಕ್ಷಗಾನ ಗುರುಗಳಾದ ಶೇಖರ್ ಡಿ.ಶೆಟ್ಟಿಗಾರ್ ಕಿನ್ನಿಗೋಳಿ ಕಾರ್ಯಕ್ರಮದ ಉದ್ಘಾಟನಾ ದೀಪವನ್ನು ಬೆಳಗಿಸಿ ಉದ್ಘಾಟಿಸಿದರು.

ಆಮಂತ್ರಣ ಪತ್ರಿಕೆ ಮತ್ತು ಟಿಕೆಟ್ ಬಿಡುಗಡೆಗೊಳಿಸಿ ಮಾತನಾಡಿದ ಸರ್ವೋತ್ತಮ ಶೆಟ್ಟಿ, ಕಳೆದ ಒಂಬತ್ತು ವರ್ಷದಿಂದ ಅಭ್ಯಾಸ ಕೇಂದ್ರದ ಕಾರ್ಯಕ್ರಮಗಳನ್ನು ನೋಡುತ್ತ ಬಂದಿದ್ದೇನೆ. ಒಳ್ಳೆಯ ಕಾರ್ಯಕ್ರಮವನ್ನು ನೀಡುತ್ತ ಬಂದಿರುವುದರಿಂದ ಅಭ್ಯಾಸ ಕೇಂದ್ರದ ಕಾರ್ಯಕ್ರಮದ ಬಗ್ಗೆ ಯುಎಇಯ ಜನರು ಮೆಚ್ಚುಗೆಯ ಮಾತುಗಳನ್ನು ಆಡುತ್ತಾ ಇದ್ದಾರೆ. ದಶಮಾನೋತ್ಸವ ಕಾರ್ಯಕ್ರಮ ಇನ್ನಷ್ಟು ಮೆಚ್ಚುಗೆಯನ್ನು ಪಡೆಯಲಿ, ಹಾಗೇಯೆ ರಂಗದ ಹಿಂದೆ ನಿರ್ದೇಶನ ಮಾಡುತ್ತಿರುವ ಗುರುಗಳಾದ ಶೇಖರ್ ಶೆಟ್ಟಿಗಾರ್ ಮತ್ತು ಶರತ್ ಕುಡ್ಲರವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತ ಜೂನ್ 29ರಂದು ನಡೆಯಲಿರುವ ದಶಮಾನೋತ್ಸವ ಕಾರ್ಯಕ್ರಮಕ್ಕೆ ಶುಭವನ್ನು ಹಾರೈಸಿದರು.

ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿಯವರು ಮಾತನಾಡುತ್ತಾ, ಕಳೆದ ಹತ್ತು ವರ್ಷಳಿಂದ ನನ್ನ ಸಂಸ್ಥೆಯಲ್ಲಿ ಯಕ್ಷಗಾನದ ಮುಹೂರ್ತ ಪೂಜೆ ಮತ್ತು ತರಗತಿಗಳು ನಡೆಯುವುದರಿಂದ ಶ್ರೀ ದೇವಿಯ ಸ್ತುತಿಯನ್ನು ವಾರ ಕೇಳುತ್ತ ಇದ್ದೇನೆ. ಹತ್ತನೇ ವರ್ಷದ ಕಾರ್ಯಕ್ರಮದ ಕ್ಷಣಗಣನೆಯಲ್ಲಿ ನಾವೆಲ್ಲ ಇದ್ದೇವೆ, ಉತ್ತಮ ಕಾರ್ಯಕ್ರಮವಾಗಿ ಮೂಡಿಬರಲಿ ಎಂದು ಹಾರೈಸಿದರು.

ಉಪಸ್ಥಿತರಿದ್ದ ಎಲ್ಲಾ ಕನ್ನಡ, ತುಳು ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮಾತನಾಡುತ್ತಾ, ನಮ್ಮ ಹಾಗೂ ನಮ್ಮ ಸಮಾಜದ ಸಂಪೂರ್ಣ ಸಹಕಾರ ಇದೆ ಎಂದು ಹೇಳುತ್ತ ಜೂನ್ ನಲ್ಲಿ ನಡೆಯಲಿರುವ ದಶಮಾನೋತ್ಸವ ಕಾರ್ಯಕ್ರಮಕ್ಕೆ ಶುಭವನ್ನು ಹಾರೈಸಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಕೇಂದ್ರದ ಸಂಚಾಲಕ ದಿನೇಶ್ ಶೆಟ್ಟಿ ಕೊಟ್ಟಿಂಜ ಮತ್ತು ಕೇಂದ್ರದ ಗುರುಗಳಾದ ಶೇಖರ್ ಡಿ.ಶೆಟ್ಟಿಗಾರ್ ಅವರು, ಜೂನ್ 29 ರಂದು ಕರಾಮ ಇಂಡಿಯಾನ್ ಸ್ಕೂಲ್ ನ ಶೇಖ್ ರಷೀದ್ ಆಡಿಟೋರಿಯಂನ ಸಭಾಂಗಣದಲ್ಲಿ ಬೆಳಗ್ಗೆ 9 ಗಂಟೆಯಿಂದ ಸಂಜೆ 7 ಗಂಟೆಯ ವರೆಗೆ ಕಾರ್ಯಕ್ರಮ ನಡೆಯಲಿರುವುದು. ಬೆಳಗ್ಗೆಯಿಂದ ಹತ್ತು ಚೆಂಡೆವಾದಕರಿಂದ ಅಬ್ಬರ ತಾಳ, ಖ್ಯಾತ ಭಾಗವತರಾದ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ, ದೇವಿಪ್ರಸಾದ್ ಆಳ್ವ ತಲಪಾಡಿ, ಕಾವ್ಯ ಶ್ರೀ ಅಜೇರುರವರಿಂದ ಯುಎಇಯಲ್ಲಿ ಮೊತ್ತಮೊದಲ ಬಾರಿಗೆ ಯಕ್ಷ ಗಾಯನ ಸೌರಭ, ಪೂರ್ವರಂಗ ನಂತರ ಯಕ್ಷಗಾನ ಶೋಭಾಯಾತ್ರೆಯೊಂದಿಗೆ ದಶಮಾನೋತ್ಸವದ ಸಭಾಕಾರ್ಯಕ್ರಮ ನಡೆಯಲಿದೆ. ಈ ಸಭಾ ಕಾರ್ಯಕ್ರಮದಲ್ಲಿ ಯುಎಇಯ ಹತ್ತು ಮಂದಿ ಸಾಧಕರಿಗೆ ಗೌರವ ಸನ್ಮಾನ ಜರುಗಲಿದೆ ಎಂದು ತಿಳಿಸಿದರು.

ಬಳಿಕ ಕೇಂದ್ರದ ಕಲಾವಿದರು ಹಾಗೂ ಊರಿನ ಪ್ರಖ್ಯಾತ ಕಲಾವಿದರಿಂದ “ಶಿವಾನಿ ಸಿಂಹವಾಹಿನಿ” ಯಕ್ಷಗಾನ ಪ್ರದರ್ಶನ ನಡೆಯಲಿದೆ. ಊರಿನ ಮುಮ್ಮೇಳ ಕಲಾವಿದರಾಗಿ ಪಾವಂಜೆ ಮೇಳದ ಸುಬ್ರಾಯ ಹೊಳ್ಳ ಕಾಸರಗೋಡು ರಕ್ತಬೀಜನ ಪಾತ್ರದಲ್ಲಿ ಹಾಗೂ ಕಟೀಲು ಮೇಳದ ಖ್ಯಾತ ಸ್ತ್ರೀ ಪಾತ್ರದಾರಿ ಅರುಣ್ ಕೋಟ್ಯಾನ್ ಶ್ರೀ ದೇವಿಯಾಗಿ ದುಬೈಯ ಯಕ್ಷಗಾನದ ಅಭಿಮಾನಿಗಳನ್ನು ರಂಜಿಸಲಿದ್ದಾರೆ. ಭಾಗವತರಾಗಿ ಪಟ್ಲ ಸತೀಶ್ ಶೆಟ್ಟಿ, ದೇವಿಪ್ರಸಾದ್ ಆಳ್ವ ತಲಪಾಡಿ, ಕಾವ್ಯ ಶ್ರೀ ಅಜೇರು, ಕೃಷ್ಣ ಪ್ರಸಾದ್ ರಾವ್ ಸುರತ್ಕಲ್, ಚೆಂಡೆ ಮದ್ದಲೆಯಲ್ಲಿ ಚಂದ್ರಶೇಖರ ಸರಪಾಡಿ, ಸವಿನಯ ನೆಲ್ಲಿತೀರ್ಥ, ಭವಾನಿ ಶಂಕರ ಶರ್ಮ, ಪುತ್ತಿಗೆ ವೆಂಕಟೇಶ ಶಾಸ್ತ್ರಿ, ಚಕ್ರತಾಳದಲ್ಲಿ ಚರಣ್ ರಾಜ್, ಆದಿತ್ಯ ದಿನೇಶ್ ಶೆಟ್ಟಿ ಹಾಗೂ ಪ್ರಸಾದನ ಮತ್ತು ವೇಷ ಭೂಷಣದಲ್ಲಿ ಗಂಗಾಧರ ಡಿ. ಶೆಟ್ಟಿಗಾರ್ ಕಿನ್ನಿಗೋಳಿ, ನಿತಿನ್ ಕುಂಪಲ, ಮನೋಜ್ ಶೆಟ್ಟಿಗಾರ್ ಕಿನ್ನಿಗೋಳಿರವರು ಸಹಕರಿಸಲಿದ್ದಾರೆ. ಸಂಪೂರ್ಣ ಕಾರ್ಯಕ್ರಮದ ನಿರೂಪಣೆಯನ್ನು ಕರಾವಳಿಯ ಪ್ರಸಿದ್ದ ಟಿವಿ ಮಾದ್ಯಮದ ನಿರೂಪಕ ಚೇತನ್ ಶೆಟ್ಟಿಯವರು ನಿರ್ವಾಹಿಸಲಿದ್ದಾರೆ. ಜೊತೆಗೆ ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲಾ ಕಲಾ ಅಭಿಮಾನಿಗಳಿಗೆ ಮಧ್ಯಾಹ್ನ ಅನ್ನಪ್ರಸಾದ ವಿತರಿಸಲಾಗುವುದು ಎಂದು ದಶಮಾನೋತ್ಸವ ಕಾರ್ಯಕ್ರಮದ ಮಾಹಿತಿ ನೀಡಿದರು. ಕಾರ್ಯಕ್ರಮವನ್ನು ಕೇಂದ್ರದ ಸದಸ್ಯರಾದ ಗಿರೀಶ್ ನಾರಯಣ್ ನಿರೂಪಿಸಿದರು. ದಿನೇಶ್ ಶೆಟ್ಟಿ ಕೊಟ್ಟಿಂಜ ಸ್ವಾಗತಿಸಿ, ಧನ್ಯವಾದ ಸಮರ್ಪಿಸಿದರು.
ವಿಜಯಕುಮಾರ್ ಶೆಟ್ಟಿ ಗಾಣದಮೂಲೆ (ದುಬೈ)

Hot this week

ದ್ವೀಪದಲ್ಲಿ ‘ಬಹರೈನ್ ಕುಲಾಲ್ಸ್’ ಸಂಘಟನೆಯಿಂದ ಯಶಸ್ವಿಯಾಗಿ ಜರುಗಿದ ಮಹಿಳೆಯರ ಥ್ರೋ ಬಾಲ್ ಹಾಗು ಪುರುಷರ ವಾಲಿಬಾಲ್ ಪಂದ್ಯಾಟ

ಬಹರೈನ್: ಇಲ್ಲಿನ ಆಲಿ ಪರಿಸರದಲ್ಲಿರುವ ಆಲಿ ಕಲ್ಚರಲ್ ಅಂಡ್ ಸ್ಪೋರ್ಟ್ಸ್ ಕ್ಲಬ್ಬಿನ...

KCF Jubail Zone conducts emergency blood donation drive at Almana Hospital

Jubail, Saudi Arabia: The Karnataka Cultural Foundation (KCF) Jubail...

‘ಬಹರೈನ್ ಕನ್ನಡ ಸಂಘ’ದ ನೂತನ ಅಧ್ಯಕ್ಷರಾಗಿ ಅಜಿತ್ ಬಂಗೇರ ಆಯ್ಕೆ

ಬಹರೈನ್: 'ಬಹರೈನ್ ಕನ್ನಡ ಸಂಘ'ದ 2025-26ರ ಅವಧಿಗೆ ನೂತನ ಕಾರ್ಯಕಾರಿ ಸಮಿತಿಯನ್ನು...

New committee formed for United Padubidrians UAE new term

Dubai, UAE: The United Padubidrians UAE has officially announced...

Related Articles

Popular Categories