ಬಹರೈನ್ಅಕ್ಟೋಬರ್ 17ರಂದು 'ಬಹರೈನ್ ಬಿಲ್ಲವಾಸ್'ನಿಂದ 'ಗುರುವಂದನೆ'-ಸಾಂಸ್ಕ್ರತಿಕ ವೈಭವ

ಅಕ್ಟೋಬರ್ 17ರಂದು ‘ಬಹರೈನ್ ಬಿಲ್ಲವಾಸ್’ನಿಂದ ‘ಗುರುವಂದನೆ’-ಸಾಂಸ್ಕ್ರತಿಕ ವೈಭವ

ಬಹರೈನ್: ಇಲ್ಲಿನ ಅನಿವಾಸಿ ಬಿಲ್ಲವರ ಒಕ್ಕೂಟವಾದ “ಬಹರೈನ್ ಬಿಲ್ಲವಾಸ್” ಅಕ್ಟೋಬರ್ 17ರ ಶುಕ್ರವಾರದ ಸಂಜೆ ಕನ್ನಡ ಭವನದ ಸಾಂಸ್ಕ್ರತಿಕ ಸಭಾಂಗಣದಲ್ಲಿ “ಗುರು ವಂದನೆ” ಕಾರ್ಯಕ್ರಮವನ್ನು ಆಯೋಜಿಸಿದೆ.

ಕನ್ಯಾಡಿ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಮಹಾಮಂಡಲೇಶ್ವರ 1008 ಶ್ರೀ ಸ್ವಾಮೀ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜರು ಗುರುವಂದನೆ ಕಾರ್ಯಕ್ರಮಕ್ಕಾಗಿಯೇ ವಿಶೇಷವಾಗಿ ದ್ವೀಪ ರಾಷ್ಟ್ರ ಬಹರೈನ್ ಗೆ ಆಗಮಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಗುರುವಂದನೆ ಕಾರ್ಯಕ್ರಮದ ಅಂಗವಾಗಿ ಸ್ವಾಮೀಜಿಯವರಿಂದ ಆಶೀರ್ವಚನ, ವಿವಿಧ ಭಜನಾ ಮಂಡಳಿಗಳಿಂದ ಭಜನಾ ಮಹೋತ್ಸವ, ಕುಣಿತ ಭಜನೆ ಹಾಗು ಇನ್ನಿತರ ಸಾಂಸ್ಕ್ರತಿಕ ಕಾರ್ಯಕ್ರಮಗಳು ಜರುಗಲಿವೆ.

ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಯುನೀಕೊ ಸಮೂಹ ಸಸಂಸ್ಥೆಗಳ ಸಿಇಒ ಜಯಶಂಕರ್ ವಿಶ್ವನಾಥನ್ ಅವರು ಭಾಗವಹಿಸಲಿದ್ದು, ವಿಶೇಷ ಅತಿಥಿಗಳಾಗಿ ಕ್ರಿಶ್ಚಿಯನ್ ಧರ್ಮಗುರುಗಳಾದ ಫಾದರ್ ಸಾಜಿ ಥಾಮಸ್ ಹಾಗು ಗೌರವಾನ್ವಿತ ಅತಿಥಿಗಳಾಗಿ ರಾಷ್ಟ್ರೀಯ ಬಿಲ್ಲವ ಮಹಾಮಂಡಲದ ಮಹಿಳಾ ಘಟಕದ ಅಧ್ಯಕ್ಷೆ ಗೀತಾಂಜಲಿ ಸುವರ್ಣರವರು ಭಾಗವಹಿಸಲಿದ್ದಾರೆ.

ಇಲ್ಲಿನ ಕನ್ನಡ ಸಂಘದ ಅಧ್ಯಕ್ಷರಾದ ಅಜಿತ್ ಬಂಗೇರ ಸೇರಿದಂತೆ ದ್ವೀಪದ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಮಾತ್ರವಲ್ಲದೆ ಇತರ ಕೊಲ್ಲಿ ರಾಷ್ಟ್ರಗಳ ವಿವಿಧ ಸಂಘಟನೆಗಳ ಅಧ್ಯಕ್ಷರು, ಪಧಾದಿಕಾರಿಗಳು, ಗಣ್ಯರು ಈ ಸಾಂಸ್ಕ್ರತಿಕ ಸಂಭ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಈ ಗುರುವಂದನಾ ಕಾರ್ಯಕ್ರಮವು ಸಂಜೆ 4 ಗಂಟೆಗೆ ಸರಿಯಾಗಿ ಸ್ವಾಮೀಜಿಯವರನ್ನು ಪೂರ್ಣಕುಂಭ ಸ್ವಾಗತದೊಂದಿಗೆ ಬರಮಾಡಿಕೊಳ್ಳುವುದರೊಂದಿಗೆ ಪ್ರಾರಂಭಗೊಂಡು ವಿವಿಧ ಸಾಂಸ್ಕ್ರತಿಕ ಕಾರ್ಯಕ್ರಮಗಳೊಂದಿಗೆ ಕಾರ್ಯಕ್ರಮವು ಸಂಪನ್ನಗೊಳ್ಳಲಿದ್ದು, ಕಾರ್ಯಕ್ರಮದ ಕೊನೆಗೆ ಮಹಾಪ್ರಸಾದದ ಅಂಗವಾಗಿ ವಿಶೇಷ ಭೋಜನದ ವ್ಯವಸ್ಥೆಯನ್ನು ಮಾಡಲಾಗಿದೆ. ದ್ವೀಪದ ಎಲ್ಲಾ ಕನ್ನಡ ಹಾಗು ತುಳು ಸಮುದಾಯದವರಿಗೆ ಈ ಕಾರ್ಯಕ್ರಮಕ್ಕೆ ಮುಕ್ತ ಪ್ರವೇಶವಿದ್ದು, ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಬಹರೈನ್ ಬಿಲ್ಲವಾಸ್ ನ ಅಧ್ಯಕ್ಷ ಪ್ರಕಾಶ್ ಅಂಚನ್ ಕರೆ ನೀಡಿದ್ದಾರೆ. ಈ ಕಾರ್ಯಕ್ರಮದ ಸಂಯೋಜಕರಾಗಿ ಹರೀಶ್ ಪೂಜಾರಿಯವರು ಕಾರ್ಯನಿರ್ವಹಿಸುತ್ತಿದ್ದು, ಕಾರ್ಯಕ್ರಮದ ಬಗೆಗಿನ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 00973 39049132 ಮೂಲಕ ಸಂಪರ್ಕಿಸಬಹುದು.

ವರದಿ: ಕಮಲಾಕ್ಷ ಅಮೀನ್

Hot this week

Kuwait: KCWA’s annual family picnic draws over 600 attendees at Mishref Garden

Kuwait: The Kuwait Canara Welfare Association (KCWA) organised its...

ಖತರ್‌ನಲ್ಲಿ ಕರಾವಳಿ ಕನ್ನಡಿಗನ ಸಾಧನೆ; ಅಂಡರ್ 19 ಕ್ರಿಕೆಟ್ ತಂಡಕ್ಕೆ ಮಂಗಳೂರು ಮೂಲದ ಎಸ್ಸಾಮ್ ಮನ್ಸೂರ್ ಆಯ್ಕೆ

ದೋಹಾ: ಕರ್ನಾಟಕದ ಮಂಗಳೂರು ಮೂಲದ ಯುವಕ ಎಸ್ಸಾಮ್ ಮನ್ಸೂರ್, ಖತರ್ ಅಂಡರ್...

ರೊನಾಲ್ಡ್ ಮಾರ್ಟಿಸ್​ಗೆ ಶಾರ್ಜಾ ಕರ್ನಾಟಕ ಸಂಘದಿಂದ ‘ಮಯೂರ-ವಿಶ್ವಮಾನ್ಯ ಕನ್ನಡಿಗ ಅಂತಾರಾಷ್ಟ್ರೀಯ ಪ್ರಶಸ್ತಿ’ ಪ್ರದಾನ

ದುಬೈ: ದುಬೈನಲ್ಲಿ ಇರುವ ಕನ್ನಡ ಪರ ಸಂಘಟನೆಗಳಲ್ಲಿ ಅರ್ಥಪೂರ್ಣ ಕಾರ್ಯಕ್ರಮ ಮಾಡುವುದರಲ್ಲಿ...

ಖತರ್‌ನಲ್ಲಿ ಕರ್ನಾಟಕ ರಾಜ್ಯೋತ್ಸವ – ರಜತ ಸಂಭ್ರಮ ಸಮಾರೋಪ: ಗಲ್ಫ್ ನಾಡಿನಲ್ಲಿ ಗಂಧದ ನಾಡಿನ ವೈಭವ

ದೋಹಾ(ಖತರ್‌): ಕರ್ನಾಟಕ ಸಂಘ ಖತರ್‌ (KSQ)ನ ಕರ್ನಾಟಕ ರಾಜ್ಯೋತ್ಸವ – ರಜತ...

ದುಬೈ: ಕನ್ನಡಿಗರ ಕೂಟದಿಂದ ʼಕನ್ನಡ ರಾಜ್ಯೋತ್ಸವ 2025ʼ ಭವ್ಯ ಸಂಭ್ರಮ

ದುಬೈ: ಕನ್ನಡಿಗರ ಕೂಟ – ದುಬೈ ಮತ್ತು ಗಲ್ಫ್ ಕನ್ನಡ ಮೂವೀಸ್...

Related Articles

Popular Categories