ಯುಎಇದುಬೈನಲ್ಲಿ ಮೇ 31ರಂದು ಸಂಗೀತ ಸೌರಭ-ನವೆಂಬರ್ 8ರಂದು ಕರ್ನಾಟಕ...

ದುಬೈನಲ್ಲಿ ಮೇ 31ರಂದು ಸಂಗೀತ ಸೌರಭ-ನವೆಂಬರ್ 8ರಂದು ಕರ್ನಾಟಕ ರಾಜ್ಯೋತ್ಸವ: ಕನ್ನಡಿಗರ ಕೂಟ ದುಬೈಯ ವಾರ್ಷಿಕ ಕಾರ್ಯಕ್ರಮಗಳ ಪಟ್ಟಿ ಬಿಡುಗಡೆ

ದುಬೈ: ಯುಎಇಯ ಕನ್ನಡಿಗರ ಕೂಟ ದುಬೈಯ ಮುಂದಿನ ವಾರ್ಷಿಕ ಕಾರ್ಯಕ್ರಮಗಳ ಬಗ್ಗೆ ಅಧ್ಯಕ್ಷ ಅರುಣ್ ಕುಮಾರ್ ಎಂಕೆ ನೇತೃತ್ವದಲ್ಲಿ ಇತ್ತೀಚಿಗೆ ಸಮಿತಿ ಸಭೆ ಕರೆಯಲಾಗಿತ್ತು.

ಸಭೆಯಲ್ಲಿ 2025-26ರ ಸಾಲಿನ ಇತರ ಸಾಮಾಜಿಕ ಕಾರ್ಯಗಳನ್ನು ಅನುಸರಿಸಿ ಎರಡು ಪ್ರಮುಖ ಕಾರ್ಯಕ್ರಮಗಳನ್ನು ಅಧಿಕೃತಗೊಳಿಸಲಾಯಿತು. ಮೇ 31ರಂದು ಸಂಗೀತ ಸೌರಭ ಮತ್ತು ನವೆಂಬರ್ 8ರಂದು ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮವನ್ನು ನಡೆಸುವುದಾಗಿ ಸಭೆಯಲ್ಲಿ ಒಕ್ಕೊರಳಿನಿಂದ ನಿರ್ಧಾರ ಕೈಗೊಳ್ಳಲಾಯಿತು.

ಈ ವೇಳೆ ಮಾತನಾಡಿದ ಅಧ್ಯಕ್ಷ ಅರುಣ್ ಕುಮಾರ್ ಎಂಕೆ, ಮುಂಬರುವ ಕಾರ್ಯಕ್ರಮಗಳಿಗೆ ಎಲ್ಲರೂ ಕೈಜೋಡಿಸಬೇಕು. ಈ ಮಹತ್ವದ ಸಾಂಸ್ಕೃತಿಕ ಆಚರಣೆಗಳನ್ನು ದುಬೈನಲ್ಲಿರುವ ನಮ್ಮ ಸಮುದಾಯದ ಒಟ್ಟುಗೂಡಿಕೆಯ ಮೂಲಕ ಆಚರಿಸಬೇಕು. ಈ ಕಾರ್ಯಕ್ರಮಗಳು ನಮ್ಮ ಪರಂಪರೆಯನ್ನು ಪ್ರದರ್ಶಿಸುವುದು ಮಾತ್ರವಲ್ಲದೆ ನಮ್ಮ ಕನ್ನಡಿಗ ಕುಟುಂಬದೊಳಗಿನ ಬಾಂಧವ್ಯವನ್ನು ಬಲಪಡಿಸುತ್ತದೆ. ದುಬೈ ಮತ್ತು UAE ಯುಎಇಯಲ್ಲಿರುವ ಅನಿವಾಸಿ ಕನ್ನಡಿಗರ ಏಕತೆಯ ಶಕ್ತಿಯನ್ನು ತೋರಿಸಲು ಎಲ್ಲರೂ ಕೈಜೋಡಿಸಬೇಕೆಂದು ವಿನಂತಿಸಿದರು.

ಅಲ್ಲದೆ ರಕ್ತದಾನ ಶಿಬಿರ, ಯುಗಾದಿ ಆಚರಣೆ, ಇಫ್ತಾರ್ ಆಚರಣೆ, ದುಬೈನ ಕಾರ್ಮಿಕ ಶಿಬಿರದಲ್ಲಿ ವಿಶ್ವ ಕಾರ್ಮಿಕ ದಿನಾಚರಣೆ, ಉಚಿತ ಆರೋಗ್ಯ ತಪಾಸಣೆ, ಹುಟ್ಟೂರ ಸನ್ಮಾನ (ತವರು ಊರಿನಲ್ಲಿ ಸಾಧಕರನ್ನು ಸನ್ಮಾನಿಸುವುದು), ಕ್ರೀಡಾ ದಿನಾಚರಣೆಯಂತಹ ಇತರ ಸಾಮಾಜಿಕ ಕಾರ್ಯಕ್ರಮಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಸಭೆಯಲ್ಲಿ ಸಮಿತಿಯ ಉಪಾಧ್ಯಕ್ಷ ವಿನೀತ್ ರಾಜ್, ಮುಖ್ಯ ಸಲಹೆಗಾರ ಸದನ್ ದಾಸ್, ಸಲಹೆಗಾರರಾದ ಉಮಾ ವಿದ್ಯಾಧರ್‌, ವೀರೇಂದ್ರ ಬಾಬು, ಇಬ್ರಾಹಿಂ ಖಲೀಲ್, ಛಾಯಾ ಕೃಷ್ಣ ಮೂರ್ತಿ, ಮಂಜುನಾಥ್ ರಾಜನ್, ಪ್ರಧಾನ ಕಾರ್ಯದರ್ಶಿ ಚೇತನ್ ಸುಬ್ರಹ್ಮಣ್ಯ, ಹಿರಿಯ ಸದಸ್ಯ ಮತ್ತು ಗಲ್ಫ್ ಮೂವೀಸ್ ಸಂಸ್ಥಾಪಕ ದೀಪಕ್ ಸೋಮಶೇಖರ್, ಸಮಿತಿಯ ಸದಸ್ಯರಾದ ಶ್ರೀನಿವಾಸ್ ಅರಸ್ ಮತ್ತು ವೆಂಕಟರಮಣ ಕಾಮತ್ ಉಪಸ್ಥಿತರಿದ್ದರು.

Hot this week

ಸೋಲೋ ವಿಶ್ವ ಮೋಟಾರ್‌ಸೈಕಲ್ ಯಾತ್ರಿಕ ಗೇಬ್ರಿಯಲ್ ಶರತ್​​ರನ್ನು ಗೌರವಿಸಿದ ಕರ್ನಾಟಕ ಸಂಘ ಖತರ್

ದೋಹಾ: ಭಾರತೀಯ ಸಮುದಾಯಕ್ಕೆ ಹೆಮ್ಮೆಯ ಕ್ಷಣವಾಗುವಂತೆ, ಮಂಗಳೂರಿನ ಸಾಹಸಿ ಸೋಲೋ ವಿಶ್ವ...

ಕನ್ನಡ ಸಂಘ ಬಹರೈನ್‌ಗೆ ಪ್ರತಿಷ್ಠಿತ “ನವ ಕರ್ನಾಟಕ ರತ್ನ” ಪ್ರಶಸ್ತಿ

ಬೆಂಗಳೂರು: ಕನ್ನಡ ಭಾಷೆ, ನಾಡು-ನುಡಿ, ಕಲೆ, ಸಂಸ್ಕೃತಿ ಹಾಗೂ ಹೊರನಾಡಿನಲ್ಲಿ ಕನ್ನಡಿಗರ...

ದುಬೈಯಲ್ಲಿ ದಾಸವಾಣಿಯ ಸೊಬಗನ್ನು ಸಾರಿದ 27ನೇ ಹರಿನಾಮ ಸಂಕೀರ್ತನೆ

ದುಬೈ: ಕಳೆದ ನಾಲ್ಕು ದಶಕಗಳಿಂದ ದುಬೈಯಲ್ಲಿ ನೆಲೆಸಿದ್ದು, ಆಸಕ್ತರಿಗೆ ಕರ್ನಾಟಕ ಶಾಸ್ತ್ರೀಯ...

ಬಹರೈನ್‌; ಅ.9ರಂದು ಶ್ರೀ ನಾರಾಯಣ ಗುರು ಜಯಂತಿ ಅಂಗವಾಗಿ ‘Tribute to Bahrain’ ವಿಶೇಷ ಕಾರ್ಯಕ್ರಮ

ಮನಾಮಾ: ಬದುಕನ್ನು ಕಟ್ಟಿಕೊಳ್ಳಲು, ಕನಸುಗಳನ್ನು ನನಸಾಗಿಸಿಕೊಳ್ಳಲು ಹಾಗೂ ಭವಿಷ್ಯಕ್ಕೆ ಹೊಸ ದಿಕ್ಕು...

‘ಕನ್ನಡ ಸಂಘ ಬಹರೈನ್’ನಿಂದ ‘ಯಕ್ಷ ವೈಭವ 2026’: ಅದ್ಧೂರಿ ಯಕ್ಷಗಾನ ಪ್ರದರ್ಶನ

ಬಹರೈನ್: ಕನ್ನಡ ಸಂಘ ಬಹರೈನ್ ವತಿಯಿಂದ ಆಯೋಜಿಸಲಾದ “ಯಕ್ಷ ವೈಭವ 2026...

Related Articles

Popular Categories