ಯುಎಸ್‌ಎಅಮೇರಿಕದಲ್ಲಿ ‘ಕಾಂತಾರ: ಚಾಪ್ಟರ್ 1’ ಯಶಸ್ಸಿನ ಅಬ್ಬರ! ಸಿನೆಮಾ...

ಅಮೇರಿಕದಲ್ಲಿ ‘ಕಾಂತಾರ: ಚಾಪ್ಟರ್ 1’ ಯಶಸ್ಸಿನ ಅಬ್ಬರ! ಸಿನೆಮಾ ನೋಡಿದವರು ಏನೆಂದಿದ್ದಾರೆ ನೋಡಿ…!

ನ್ಯೂಯಾರ್ಕ್: ಬಹುನಿರೀಕ್ಷಿತ ‘ಕಾಂತಾರ: ಚಾಪ್ಟರ್ 1’ ಎಲ್ಲೆಡೆ ಬಿಡುಗಡೆಗೊಂಡಿದ್ದು, ಅಮೇರಿಕದ ನ್ಯೂಯಾರ್ಕ್ ರಾಜ್ಯದ ರಾಜಧಾನಿ ಆಲ್ಬನಿಯಲ್ಲಿ ಸುಮಾರು 50 ಜನ ಕನ್ನಡಿಗರು ಬೆಂಕಿ ಬಸಣ್ಣನವರ ನೇತೃತ್ವದಲ್ಲಿ ಸಿನಿಮಾವನ್ನು ರಿಲೀಸ್ ಆದ ದಿನವೇ ಮೊಟ್ಟ ಮೊದಲ ಶೋ ನೋಡಿ ಸಂಭ್ರಮಿಸಿದರು.

ಕನ್ನಡ ಮಣ್ಣಿನ ‘ಕಾಂತಾರ: ಚಾಪ್ಟರ್ 1’ ಚಲನಚಿತ್ರವು ಕನ್ನಡ ಮಾತ್ರವಲ್ಲದೇ, ತಮಿಳು, ತೆಲುಗು ಮತ್ತು ಹಿಂದಿ ಭಾಷೆಯಲ್ಲಿ ಆಲ್ಬನಿಯಲ್ಲಿ ಬಿಡುಗಡೆಯಾಗಿದೆ. ಇಲ್ಲಿರುವ ಅನ್ಯ ಭಾಷೆಯ ಭಾರತೀಯರ ಮುಂದೆ ಕನ್ನಡ ಸಿನಿಮಾ ಈ ಮಟ್ಟದಲ್ಲಿ ಪ್ರದರ್ಶನಗೊಳ್ಳುತ್ತಿರುವುದಕ್ಕೆ ಕನ್ನಡಿಗರು ಹೆಮ್ಮೆ ಪಟ್ಟುಕೊಂಡರು.

ಈ ಸಂದರ್ಭದಲ್ಲಿ ಮಾತನಾಡಿದ ಬೆಂಕಿ ಬಸಣ್ಣ, ‘ಹೀರೊ ರಿಷಬ್ ಶೆಟ್ಟಿ, ನಾಯಕಿ ರುಕ್ಮಿಣಿ ಮತ್ತು ಇತರ ಕಲಾವಿದರ ಅಭಿನಯ ಅದ್ಭುತವಾಗಿದೆ. ಕೊನೆಯ 40 ನಿಮಿಷ ಮೈ ರೋಮಾಂಚನಗೊಳಿಸುತ್ತದೆ. ಆದರೆ ಈ ಸಿನಿಮಾದಲ್ಲಿ ಪ್ರಾರಂಭದಿಂದ ಕೊನೆಯವರೆಗೂ ಬಡಿದಾಟ, ಹೊಡೆದಾಟಗಳ ಆರ್ಭಟ ತುಂಬಿದೆ. ಇನ್ನು ಮೂರು ಅಥವಾ ನಾಲ್ಕು ಇಂಪಾದ ಹಾಡುಗಳು ಇದ್ದರೆ ಚೆನ್ನಾಗಿರುತ್ತಿತ್ತು. ಈ ಸಿನಿಮಾ ಪುಷ್ಪ ಮತ್ತು ಬಾಹುಬಲಿ ಸಿನಿಮಾಗಳಿಂದ ಪ್ರಭಾವವಾದಂತೆ ಕಂಡಿತು. ಈ ಹಿಂದೆ ಬಂದ ಕಾಂತಾರ ಸಿನಿಮಾ ಗೆದ್ದಿದ್ದು ತನ್ನ ಮೂಲ ವಿಭಿನ್ನ ಕಥೆಯಿಂದಾಗಿ. ಆದರೆ ಈ ಸಿನಿಮಾದ ಕಥೆ ಅಷ್ಟೊಂದು ಪರಿಣಾಮಕಾರಿಯಾಗಿಲ್ಲ’ ಎಂದು ಹೇಳಿದರು.

Hot this week

ಸೋಲೋ ವಿಶ್ವ ಮೋಟಾರ್‌ಸೈಕಲ್ ಯಾತ್ರಿಕ ಗೇಬ್ರಿಯಲ್ ಶರತ್​​ರನ್ನು ಗೌರವಿಸಿದ ಕರ್ನಾಟಕ ಸಂಘ ಖತರ್

ದೋಹಾ: ಭಾರತೀಯ ಸಮುದಾಯಕ್ಕೆ ಹೆಮ್ಮೆಯ ಕ್ಷಣವಾಗುವಂತೆ, ಮಂಗಳೂರಿನ ಸಾಹಸಿ ಸೋಲೋ ವಿಶ್ವ...

ಕನ್ನಡ ಸಂಘ ಬಹರೈನ್‌ಗೆ ಪ್ರತಿಷ್ಠಿತ “ನವ ಕರ್ನಾಟಕ ರತ್ನ” ಪ್ರಶಸ್ತಿ

ಬೆಂಗಳೂರು: ಕನ್ನಡ ಭಾಷೆ, ನಾಡು-ನುಡಿ, ಕಲೆ, ಸಂಸ್ಕೃತಿ ಹಾಗೂ ಹೊರನಾಡಿನಲ್ಲಿ ಕನ್ನಡಿಗರ...

ದುಬೈಯಲ್ಲಿ ದಾಸವಾಣಿಯ ಸೊಬಗನ್ನು ಸಾರಿದ 27ನೇ ಹರಿನಾಮ ಸಂಕೀರ್ತನೆ

ದುಬೈ: ಕಳೆದ ನಾಲ್ಕು ದಶಕಗಳಿಂದ ದುಬೈಯಲ್ಲಿ ನೆಲೆಸಿದ್ದು, ಆಸಕ್ತರಿಗೆ ಕರ್ನಾಟಕ ಶಾಸ್ತ್ರೀಯ...

ಬಹರೈನ್‌; ಅ.9ರಂದು ಶ್ರೀ ನಾರಾಯಣ ಗುರು ಜಯಂತಿ ಅಂಗವಾಗಿ ‘Tribute to Bahrain’ ವಿಶೇಷ ಕಾರ್ಯಕ್ರಮ

ಮನಾಮಾ: ಬದುಕನ್ನು ಕಟ್ಟಿಕೊಳ್ಳಲು, ಕನಸುಗಳನ್ನು ನನಸಾಗಿಸಿಕೊಳ್ಳಲು ಹಾಗೂ ಭವಿಷ್ಯಕ್ಕೆ ಹೊಸ ದಿಕ್ಕು...

‘ಕನ್ನಡ ಸಂಘ ಬಹರೈನ್’ನಿಂದ ‘ಯಕ್ಷ ವೈಭವ 2026’: ಅದ್ಧೂರಿ ಯಕ್ಷಗಾನ ಪ್ರದರ್ಶನ

ಬಹರೈನ್: ಕನ್ನಡ ಸಂಘ ಬಹರೈನ್ ವತಿಯಿಂದ ಆಯೋಜಿಸಲಾದ “ಯಕ್ಷ ವೈಭವ 2026...

Related Articles

Popular Categories