ಸೌದಿ: ಗುರುವಾರ ರಾತ್ರಿ ಜಿದ್ದಾದಿಂದ ಮಂಗಳೂರಿಗೆ ಏರ್ ಇಂಡಿಯಾ ಎಕ್ಸ್ ಪ್ರೆಸ್ ನಲ್ಲಿ ಪ್ರಯಾಣಿಸಬೇಕಿದ್ದ ಬೆಳ್ತಂಗಡಿಯ ಹಿದಾಯತ್ ಎಂಬವರು ಜಿದ್ದಾ ವಿಮಾನ ನಿಲ್ದಾಣದಲ್ಲಿಯೇ ಹೃದಯಾಘಾತದಿಂದ ಮೃತರಾಗಿರುವ ಘಟನೆ ವರದಿಯಾಗಿದೆ.
ನಿನ್ನೆ ರಾತ್ರಿ 8:10ರ ಏರ್ ಇಂಡಿಯಾ ವಿಮಾನದಲ್ಲಿ ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸಬೇಕಿದ್ದ ಬೆಳ್ತಂಗಡಿ ಸಂಜಯನಗರ ನಿವಾಸಿ ಹಿದಾಯತ್ ಗೆ, ಜಿದ್ದಾ ಏರ್ ಪೋರ್ಟ್ ತಲುಪುತ್ತಿದ್ದಂತೆ ಎದೆ ನೋವು ಕಾಣಿಸಿಕೊಂಡಿತು. ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅಲ್ಲಿ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಮೃತರು ತಂದೆ-ತಾಯಿ, ಪತ್ನಿ ಹಾಗೂ ಒಂದು ಗಂಡು, ಮೂರು ಹೆಣ್ಣು ಮಕ್ಕಳು ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.