Lead Newsಇಂದು (ಜ.17) ಫ್ಲೋರಿಡಾದ ಶ್ರೀಗಂಧ ಕನ್ನಡ ಕೂಟದಿಂದ 'ಹೊಸಬೆಳಕು'...

ಇಂದು (ಜ.17) ಫ್ಲೋರಿಡಾದ ಶ್ರೀಗಂಧ ಕನ್ನಡ ಕೂಟದಿಂದ ‘ಹೊಸಬೆಳಕು’ ಕಾರ್ಯಕ್ರಮ; ಮೋಡಿ ಮಾಡಲಿದ್ದಾರೆ ರಾಜೇಶ್ ಕೃಷ್ಣನ್

ಅಮೇರಿಕ: ಫ್ಲೋರಿಡಾದ ಶ್ರೀಗಂಧ ಕನ್ನಡ ಕೂಟವು ಸಂಕ್ರಾಂತಿ ಹಿನ್ನೆಲೆಯಲ್ಲಿ ಇಂದು(ಜನವರಿ 17) ಟ್ಯಾಂಪಾ ನಗರದ ಇಂಡಿಯನ್ ಕಲ್ಚರಲ್ ಸೆಂಟರ್ ನಲ್ಲಿ ‘ಹೊಸಬೆಳಕು’ ಎಂಬ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಿದೆ.

ಮಧ್ಯಾಹ್ನ 12 ಗಂಟೆಯಿಂದ ಆರಂಭವಾಗಲಿರುವ ಕಾರ್ಯಕ್ರಮವು ರಾತ್ರಿ 11ರ ವರಗೆ ನಡೆಯಲಿದೆ. ಪ್ರಸಿದ್ಧ ಗಾಯಕ ಮೆಲೋಡಿ ಕಿಂಗ್ ರಾಜೇಶ್ ಕೃಷ್ಣನ್ ಅವರಿಂದ ರಾತ್ರಿ 7.30ರಿಂದ 11ರ ವರಗೆ ಸಂಗೀತ ಕಾರ್ಯಕ್ರಮ ನಡೆಯಲಿದೆ.

ಕಾರ್ಯಕ್ರಮದಲ್ಲಿ ಯುನಿವರ್ಸಿಟಿ ಆಫ್ ಸೌತ್ ಫ್ಲೋರಿಡಾ(USF)ದ ಪ್ರಾಧ್ಯಾಪಕ ಡಾ.ಗಿಲ್ ಬೆನ್-ಹೆರೂಟ್, ಲೂಯಿಸ್ ವಿಯೇರಾ (ಟ್ಯಾಂಪಾ ಸಿಟಿ ಕೌನ್ಸಿಲ್) ಅವರು ಭಾಗವಹಿಸಲಿದ್ದಾರೆ.

ಮಧ್ಯಾಹ್ನ 12ಗಂಟೆಗೆ ಮುಖ್ಯ ಅರ್ಚಕರಾದ ಗುರುದತ್ ಅವರಿಂದ ವೇದಘೋಷ ನೆರವೇರಲಿದೆ. ಅನಂತರ ಕರ್ನಾಟಕ ಶೈಲಿ ಬಾಳೆ ಎಲೆ ಊಟ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 2ಗಂಟೆಯಿಂದ ಸಂಜೆ 6ರ ವರಗೆ ಸ್ಥಳೀಯ ಪ್ರತಿಭೆಗಳ ಸಾಂಸ್ಕೃತಿಕ ಕಾರ್ಯಕ್ರಮ, ಬಳಿಕ ಸಂಕ್ರಾಂತಿ ವಿಶೇಷ – ಲಘು ಭೋಜನ ಅನಂತರ ರಾಜೇಶ್ ಕೃಷ್ಣನ್ ಅವರಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ ಎಂದು ಫ್ಲೋರಿಡಾದ ಶ್ರೀಗಂಧ ಕನ್ನಡ ಕೂಟದ ಅಧ್ಯಕ್ಷ ಹರ್ಷಿತ್ ಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Hot this week

ದುಬೈಯಲ್ಲಿ ಸಂಕಷ್ಟಕ್ಕೀಡಾಗಿರುವ ಪ್ರವಾಸಿ ಕನ್ನಡಿಗರಿಗೆ ಧೈರ್ಯ ತುಂಬಿದ ಎಂ.ಎ.ಗಫೂರ್

ದುಬೈ: ಅಮೇರಿಕ-ಇಸ್ರೇಲ್ ಹಾಗು ಇರಾನ್ ಮಧ್ಯೆಗಿನ ಸಂಘರ್ಷದಿಂದ ದುಬೈಯಲ್ಲಿ ಸಂಕಷ್ಟಕ್ಕೀಡಾಗಿರುವ ಕನ್ನಡಿಗ...

DKSC ಕುವೈತ್ ರಾಷ್ಟ್ರೀಯ ಸಮಿತಿಯ ಅಧ್ಯಕ್ಷರಾಗಿ ಅನ್ವರ್ ಸಾಹೇಬ್ ಕುಂಜಾಲ್ ಆಯ್ಕೆ

ಕುವೈತ್: ದಕ್ಷಿಣ ಕರ್ನಾಟಕ ಸುನ್ನಿ ಸೆಂಟರ್ (DKSC), ಇದರ ಕುವೈತ್ ರಾಷ್ಟ್ರೀಯ...

ಕರ್ನಾಟಕ ಸಂಘ ಖತರ್‌ನಿಂದ ರಮಝಾನ್‌ ಸೇವಾ ಕಾರ್ಯ: ಇಫ್ತಾರ್ ಆಹಾರ ಕಿಟ್‌ಗಳ ವಿತರಣೆ

ಕರ್ನಾಟಕ ಸಂಘ ಖತರ್‌ (KSQ), ರಮಝಾನ್‌ ಮಾಸದ ಪವಿತ್ರ ಚಟುವಟಿಕೆಗಳ ಭಾಗವಾಗಿ...

ಅಟ್ಲಾಂಟ ಒಕ್ಕಲಿಗರ ಕೂಟದಿಂದ ಪ್ರಥಮ ಸಮಾವೇಶ

ಕೆ. ಆರ್. ಶ್ರೀನಾಥ್, ಅಟ್ಲಾಂಟ ಅಟ್ಲಾಂಟ: ಫೆಬ್ರವರಿ 22ರ ರವಿವಾರದಂದು ಅಟ್ಲಾಂಟದಲ್ಲಿ ನೆಲಸಿರುವ...

Related Articles

Popular Categories