ಕುವೈತ್ ಪ್ರವಾಸದಲ್ಲಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಕುವೈತ್ ನ ಅತ್ಯುನ್ನತ ಗೌರವ ʼದಿ ಆರ್ಡರ್ ಆಫ್ ಮುಬಾರಕ್ ಅಲ್ ಅಲ್ ಕಬೀರ್ʼ ನೀಡಿ ಗೌರವಿಸಲಾಯಿತು.
ಕುವೈತ್ ನ ಅಮೀರ್ ಶೇಖ್ ಮಿಶಾಲ್ ಅಲ್ ಅಹ್ಮದ್ ಅಲ್ ಜಾಬಿರ್ ಅಲ್ ಸಬಾಹ್ ಅವರು ಈ ಗೌರವ ಪ್ರದಾನಿಸಿದರು. ಇದು ಪ್ರಧಾನಿ ಮೋದಿಯವರಿಗೆ ದೇಶವೊಂದು ನೀಡುತ್ತಿರುವ 20ನೇ ಅಂತಾರಾಷ್ಟ್ರೀಯ ಗೌರವವಾಗಿದೆ.
ಇದನ್ನು ದೇಶವೊಂದರ ನಾಯಕರು, ವಿದೇಶಿ ಸಾರ್ವಭೌಮರು ಮತ್ತು ವಿದೇಶಿ ರಾಜಮನೆತನದ ಸದಸ್ಯರಿಗೆ ಸ್ನೇಹದ ಸಂಕೇತವಾಗಿ ನೀಡಲಾಗುತ್ತದೆ. ಈ ಮೊದಲು ʼದಿ ಆರ್ಡರ್ ಆಫ್ ಮುಬಾರಕ್ ಅಲ್ ಕಬೀರ್ʼ ಗೌರವವನ್ನು ಬಿಲ್ ಕ್ಲಿಂಟನ್, ಪ್ರಿನ್ಸ್ ಚಾರ್ಲ್ಸ್ ಮತ್ತು ಜಾರ್ಜ್ ಬುಷ್‌ರಂತಹ ನಾಯಕರಿಗೆ ನೀಡಲಾಗಿತ್ತು.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿಯವರು, ಕುವೈತ್‌ನ ಅಮೀರ್, ಶೇಖ್ ಮಿಶಾಲ್ ಅಲ್ ಅಹ್ಮದ್ ಅಲ್ ಜಾಬಿರ್ ಅಲ್ ಸಬಾಹ್ ಅವರಿಂದ ʼಮುಬಾರಕ್ ಅಲ್-ಕಬೀರ್ʼ ಸ್ವೀಕರಿಸಿರುವುದು ನನಗೆ ಗೌರವವಾಗಿದೆ. ನಾನು ಈ ಗೌರವವನ್ನು ಭಾರತದ ಜನರಿಗೆ ಮತ್ತು ಭಾರತ ಮತ್ತು ಕುವೈತ್ ನಡುವಿನ ಸ್ನೇಹಕ್ಕೆ ಸಮರ್ಪಿಸುತ್ತಿದ್ದೇನೆ ಎಂದು ಹೇಳಿದ್ದಾರೆ.