ಇತ್ತೀಚಿಗೆ ಖತರ್‌ನ ದೋಹಾದಲ್ಲಿ ನಡೆದ ‘ದಕ್ಷಿಣ ಭಾರತ ಪ್ರತಿಭಾನ್ವೇಷಣೆಯ ಪ್ರಶಸ್ತಿ(SIGTA)’ ಪ್ರಧಾನ ಸಮಾರಂಭದಲ್ಲಿ ಕರ್ನಾಟಕದ ಬೈಂದೂರು ಮೂಲದವರಾದ ಖತರ್‌ನ ಭಾರತೀಯ ಸಾಂಸ್ಕೃತಿಕ ಕೇಂದ್ರದ ಉಪಾಧ್ಯಕ್ಷರಾದ ಸುಬ್ರಹ್ಮಣ್ಯ ಹೆಬ್ಬಾಗಿಲು ಅವರಿಗೆ ‘ಸಮುದಾಯ ಸಮರ್ಥ ಸೇವಕ’ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.


ಖತರ್‌ನ ಕಾರ್ಮಿಕ ಸಚಿವ ಸಲೀಮ್ ದರ್ವಿಶ್ ಅಲ್ ಮಹನ್, ಕನ್ನಡ ಚಿತ್ರ ನಿರ್ಮಾಪಕ, ನಟ ರಾಕ್ ಲೈನ್ ವೆಂಕಟೇಶ್ ಹಾಗು ಸಂಘಟಕರು ಪ್ರಶಸ್ತಿ ವಿತರಿಸಿದರು.
ಈ ಪ್ರಶಸ್ತಿಯು ಸುಬ್ರಹ್ಮಣ್ಯ ಹೆಬ್ಬಾಗಿಲು ಅವರ ಅಪ್ರತಿಮ ಕೊಡುಗೆ ಹಾಗೂ ಅಚಲ ಸೇವೆಯನ್ನು ಗುರುತಿಸಿ ನೀಡಲಾಗಿದೆ. ಖತರ್‌ನಲ್ಲಿ ಕಳೆದ 15 ವರ್ಷಗಳಿಗಿಂತ ಹೆಚ್ಚು ಕಾಲ ಕೆಲಸ-ಕಾರ್ಯ ಮಾಡಿಕೊಂಡಿರುವ ಸುಬ್ರಹ್ಮಣ್ಯ ಅವರು, ಹಲವಾರು ಸಾಮಾಜಿಕ, ಸಾಂಸ್ಕೃತಿಕ ಹಾಗು ಕ್ರೀಡಾ ಕಾರ್ಯಕ್ರಮಗಳಲ್ಲಿ ತೊಡಗಿಸಿ ಕೊಂಡು ಭಾರತೀಯ ಸಮುದಾಯದ ಅಭಿವೃದ್ಧಿ ಹಾಗೂ ಏಳಿಗೆಗೆ ಶ್ರಮಿಸುತ್ತಿದ್ದಾರೆ.