ಖತರ್ಖತರ್‌ನಲ್ಲಿ 'ಸಿಗ್ದಾ-ಸಮುದಾಯ ಸಮರ್ಥ ಸೇವಕ ಪ್ರಶಸ್ತಿ' ಪಡೆದ ಕನ್ನಡಿಗ...

ಖತರ್‌ನಲ್ಲಿ ‘ಸಿಗ್ದಾ-ಸಮುದಾಯ ಸಮರ್ಥ ಸೇವಕ ಪ್ರಶಸ್ತಿ’ ಪಡೆದ ಕನ್ನಡಿಗ ಸುಬ್ರಹ್ಮಣ್ಯ ಹೆಬ್ಬಾಗಿಲು

ಇತ್ತೀಚಿಗೆ ಖತರ್‌ನ ದೋಹಾದಲ್ಲಿ ನಡೆದ ‘ದಕ್ಷಿಣ ಭಾರತ ಪ್ರತಿಭಾನ್ವೇಷಣೆಯ ಪ್ರಶಸ್ತಿ(SIGTA)’ ಪ್ರಧಾನ ಸಮಾರಂಭದಲ್ಲಿ ಕರ್ನಾಟಕದ ಬೈಂದೂರು ಮೂಲದವರಾದ ಖತರ್‌ನ ಭಾರತೀಯ ಸಾಂಸ್ಕೃತಿಕ ಕೇಂದ್ರದ ಉಪಾಧ್ಯಕ್ಷರಾದ ಸುಬ್ರಹ್ಮಣ್ಯ ಹೆಬ್ಬಾಗಿಲು ಅವರಿಗೆ ‘ಸಮುದಾಯ ಸಮರ್ಥ ಸೇವಕ’ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಖತರ್‌ನ ಕಾರ್ಮಿಕ ಸಚಿವ ಸಲೀಮ್ ದರ್ವಿಶ್ ಅಲ್ ಮಹನ್, ಕನ್ನಡ ಚಿತ್ರ ನಿರ್ಮಾಪಕ, ನಟ ರಾಕ್ ಲೈನ್ ವೆಂಕಟೇಶ್ ಹಾಗು ಸಂಘಟಕರು ಪ್ರಶಸ್ತಿ ವಿತರಿಸಿದರು.

ಈ ಪ್ರಶಸ್ತಿಯು ಸುಬ್ರಹ್ಮಣ್ಯ ಹೆಬ್ಬಾಗಿಲು ಅವರ ಅಪ್ರತಿಮ ಕೊಡುಗೆ ಹಾಗೂ ಅಚಲ ಸೇವೆಯನ್ನು ಗುರುತಿಸಿ ನೀಡಲಾಗಿದೆ. ಖತರ್‌ನಲ್ಲಿ ಕಳೆದ 15 ವರ್ಷಗಳಿಗಿಂತ ಹೆಚ್ಚು ಕಾಲ ಕೆಲಸ-ಕಾರ್ಯ ಮಾಡಿಕೊಂಡಿರುವ ಸುಬ್ರಹ್ಮಣ್ಯ ಅವರು, ಹಲವಾರು ಸಾಮಾಜಿಕ, ಸಾಂಸ್ಕೃತಿಕ ಹಾಗು ಕ್ರೀಡಾ ಕಾರ್ಯಕ್ರಮಗಳಲ್ಲಿ ತೊಡಗಿಸಿ ಕೊಂಡು ಭಾರತೀಯ ಸಮುದಾಯದ ಅಭಿವೃದ್ಧಿ ಹಾಗೂ ಏಳಿಗೆಗೆ ಶ್ರಮಿಸುತ್ತಿದ್ದಾರೆ.

Hot this week

ಸೋಲೋ ವಿಶ್ವ ಮೋಟಾರ್‌ಸೈಕಲ್ ಯಾತ್ರಿಕ ಗೇಬ್ರಿಯಲ್ ಶರತ್​​ರನ್ನು ಗೌರವಿಸಿದ ಕರ್ನಾಟಕ ಸಂಘ ಖತರ್

ದೋಹಾ: ಭಾರತೀಯ ಸಮುದಾಯಕ್ಕೆ ಹೆಮ್ಮೆಯ ಕ್ಷಣವಾಗುವಂತೆ, ಮಂಗಳೂರಿನ ಸಾಹಸಿ ಸೋಲೋ ವಿಶ್ವ...

ಕನ್ನಡ ಸಂಘ ಬಹರೈನ್‌ಗೆ ಪ್ರತಿಷ್ಠಿತ “ನವ ಕರ್ನಾಟಕ ರತ್ನ” ಪ್ರಶಸ್ತಿ

ಬೆಂಗಳೂರು: ಕನ್ನಡ ಭಾಷೆ, ನಾಡು-ನುಡಿ, ಕಲೆ, ಸಂಸ್ಕೃತಿ ಹಾಗೂ ಹೊರನಾಡಿನಲ್ಲಿ ಕನ್ನಡಿಗರ...

ದುಬೈಯಲ್ಲಿ ದಾಸವಾಣಿಯ ಸೊಬಗನ್ನು ಸಾರಿದ 27ನೇ ಹರಿನಾಮ ಸಂಕೀರ್ತನೆ

ದುಬೈ: ಕಳೆದ ನಾಲ್ಕು ದಶಕಗಳಿಂದ ದುಬೈಯಲ್ಲಿ ನೆಲೆಸಿದ್ದು, ಆಸಕ್ತರಿಗೆ ಕರ್ನಾಟಕ ಶಾಸ್ತ್ರೀಯ...

ಬಹರೈನ್‌; ಅ.9ರಂದು ಶ್ರೀ ನಾರಾಯಣ ಗುರು ಜಯಂತಿ ಅಂಗವಾಗಿ ‘Tribute to Bahrain’ ವಿಶೇಷ ಕಾರ್ಯಕ್ರಮ

ಮನಾಮಾ: ಬದುಕನ್ನು ಕಟ್ಟಿಕೊಳ್ಳಲು, ಕನಸುಗಳನ್ನು ನನಸಾಗಿಸಿಕೊಳ್ಳಲು ಹಾಗೂ ಭವಿಷ್ಯಕ್ಕೆ ಹೊಸ ದಿಕ್ಕು...

‘ಕನ್ನಡ ಸಂಘ ಬಹರೈನ್’ನಿಂದ ‘ಯಕ್ಷ ವೈಭವ 2026’: ಅದ್ಧೂರಿ ಯಕ್ಷಗಾನ ಪ್ರದರ್ಶನ

ಬಹರೈನ್: ಕನ್ನಡ ಸಂಘ ಬಹರೈನ್ ವತಿಯಿಂದ ಆಯೋಜಿಸಲಾದ “ಯಕ್ಷ ವೈಭವ 2026...

Related Articles

Popular Categories