ಒಮಾನ್ಒಮನ್ ಮಸೀದಿಯ ಬಳಿ ಗುಂಡಿನ ದಾಳಿಯಲ್ಲಿ ಮೃತಪಟ್ಟ ಆರು...

ಒಮನ್ ಮಸೀದಿಯ ಬಳಿ ಗುಂಡಿನ ದಾಳಿಯಲ್ಲಿ ಮೃತಪಟ್ಟ ಆರು ಮಂದಿಯ ಪೈಕಿ ಓರ್ವ ಭಾರತೀಯ

ದುಬೈ/ಮಸ್ಕತ್: ಒಮನ್ ರಾಜಧಾನಿ ಮಸ್ಕತ್‌ನಲ್ಲಿ ಮಸೀದಿಯ ಬಳಿ ಉಗ್ರರಿಂದ ನಡೆದಿರುವ ಗುಂಡಿನ ದಾಳಿಯಲ್ಲಿ ಓರ್ವ ಭಾರತೀಯ ಪ್ರಜೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಇದರೊಂದಿಗೆ, ಸೋಮವಾರ ರಾತ್ರಿ ನಡೆದಿರುವ ಈ ಗುಂಡಿನ ದಾಳಿಯಲ್ಲಿ ಓರ್ವ ಪೊಲೀಸ್ ಸಿಬ್ಬಂದಿ ಹಾಗೂ ನಾಲ್ವರು ಪಾಕಿಸ್ತಾನಿ ಪ್ರಜೆಗಳು ಮೃತಪಟ್ಟಿದ್ದಾರೆ. ಅಲ್ಲದೆ 28 ಮಂದಿ ಗಾಯಗೊಂಡಿದ್ದಾರೆ.

ಸೋಮವಾರ ರಾತ್ರಿ ಅಲ್-ವದಿ- ಅಲ್-ಕಬೀರ್ ಪ್ರದೇಶದಲ್ಲಿ ಗುಂಡಿನ ದಾಳಿ ನಡೆಸಿದ ಮೂವರನ್ನು ಭದ್ರತಾ ಪಡೆಗಳು ಹತ್ಯೆಗೈದಿವೆ ಎಂದು ಭಾರತೀಯ ರಾಯಭಾರ ಕಚೇರಿಯು ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಈ ದಾಳಿಯ ಹೊಣೆಯನ್ನು ಐಸಿಸ್ ಹೊತ್ತುಕೊಂಡಿದೆ.

Hot this week

ಅಮೇರಿಕದಲ್ಲಿ ‘ಕಾಂತಾರ: ಚಾಪ್ಟರ್ 1’ ಯಶಸ್ಸಿನ ಅಬ್ಬರ! ಸಿನೆಮಾ ನೋಡಿದವರು ಏನೆಂದಿದ್ದಾರೆ ನೋಡಿ…!

ನ್ಯೂಯಾರ್ಕ್: ಬಹುನಿರೀಕ್ಷಿತ ‘ಕಾಂತಾರ: ಚಾಪ್ಟರ್ 1’ ಎಲ್ಲೆಡೆ ಬಿಡುಗಡೆಗೊಂಡಿದ್ದು, ಅಮೇರಿಕದ ನ್ಯೂಯಾರ್ಕ್...

ಅದ್ದೂರಿಯಾಗಿ ನಡೆದ ಕರ್ನಾಟಕ ಸಂಘ ಖತರ್‌ನ ‘ಎಂಜಿನಿಯರ್ಸ್ ಡೇ’

ದೋಹಾ(ಖತರ್): ಜಗಮೆಚ್ಚಿದ ಎಂಜಿನಿಯರ್ ಮತ್ತು ಭಾರತರತ್ನ ಸರ್. ಎಂ. ವಿಶ್ವೇಶ್ವರಯ್ಯ ಅವರ...

Related Articles

Popular Categories